ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಲಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಿಂದ ಒಕ್ಕಲಿಗ ಸಮುದಾಯದ ಯಾರೂ ತಪ್ಪಿ ಹೋಗದ ಹಾಗೆ, ತಪ್ಪು ಮಾಹಿತಿ ದಾಖಲಾದಂತೆ ಎಚ್ಚರ ವಹಿಸಲು ಒಕ್ಕಲಿಗ ಸಂಘದ ನಿರ್ದೇಶಕರಿಗೆ, ಜಿಲ್ಲಾ, ತಾಲ್ಲೂಕು ಮಟ್ಟದ ಪದಾಧಿಕಾರಿಗಳಿಗೆ ರಾಜ್ಯ ಒಕ್ಕಲಿಗ ಸಂಘವು ಗುರುವಾರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿತು.

ಜಾತಿ ಕಲಂನಲ್ಲಿ ಒಕ್ಕಲಿಗ ಎಂದು ಬರೆಸಬೇಕು. ಕುಂಚಿಟಿಗ, ಹಳ್ಳಿಕಾರ್ ಸೇರಿದಂತೆ ಉಪ ಪಂಗಡಗಳನ್ನು ಉಪ ಜಾತಿ ಕಲಂನಲ್ಲಿ ದಾಖಲಿಸಬೇಕು. ಜಾತಿ ಕಲಂನಲ್ಲಿ ಯಾರೂ ಉಪ ಜಾತಿ ನಮೂದಿಸದಂತೆ ಎಚ್ಚರಿಕೆ ವಹಿಸಬೇಕು. ಮುಂದೆ ಸರ್ಕಾರಿ ಸೌಲಭ್ಯ ಸಿಗಬೇಕಿದ್ದರೆ ಸರಿಯಾದ ಮಾಹಿತಿ ನೀಡಬೇಕು ಎಂದು ಕಾರ್ಯಕ್ರಮದಲ್ಲಿ ತಿಳಿಸಲಾಯಿತು.

ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ. ಕೆಂಚಪ್ಪಗೌಡ ಅಧ್ಯಕ್ಷತೆ ವಹಿಸಿದ್ದರು. ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸ್ಪಟಿಕಪುರಿ ಮಠದ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ನಿಶ್ಚಲಾನಂದನಾಥ ಸ್ವಾಮೀಜಿ, ಆದಿಚುಂಚನಗಿರಿ ಶಾಖಾ ಮಠದ ಪ್ರಸನ್ನನಾಥ ಸ್ವಾಮೀಜಿ, ಸೌಮ್ಯನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಗೌರವ ಅಧ್ಯಕ್ಷರಾದ ಡಿ. ಹನುಮಂತಯ್ಯ, ಯಲುವಳ್ಳಿ ಎನ್. ರಮೇಶ್, ಉಪಾಧ್ಯಕ್ಷ ಎಲ್. ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಟಿ. ಕೋನಪ್ಪರೆಡ್ಡಿ, ಸಹ ಕಾರ್ಯದರ್ಶಿ ಆರ್. ಹನುಮಂತರಾಯಪ್ಪ, ಖಜಾಂಚಿ ಎನ್. ಬಾಲಕೃಷ್ಣ ಮತ್ತು ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.