ಬೆಂಗಳೂರು: ‘ಸಾಮಾಜಿಕ–ಶೈಕ್ಷಣಿಕ(ಜಾತಿವಾರು) ಸಮೀಕ್ಷೆ ವೇಳೆ ಜಾತಿ ಕಾಲಂನಲ್ಲಿ ಒಕ್ಕಲಿಗ ಹಾಗೂ ಉಪ ಜಾತಿ ಕಾಲಂನಲ್ಲಿ ತಮ್ಮ ಉಪ ಜಾತಿಯನ್ನು ನಮೂದಿಸಬೇಕು’ ಎಂದು ಒಕ್ಕಲಿಗ ಧರ್ಮ ಮಹಾಸಭಾದ ಸಂಸ್ಥಾಪಕ ಸಿದ್ಧರಾಮ ಸ್ವಾಮೀಜಿ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಾತಿಯ ಕಾಲಂನಲ್ಲಿ ಒಕ್ಕಲಿಗ ಹಾಗೂ ಉಪ ಜಾತಿಯ ಕಾಲಂನಲ್ಲಿ ಉಪ ಜಾತಿಗಳನ್ನು ಬರೆಯಿಸಿದರೆ ಒಕ್ಕಲಿಗರ ಜನಸಂಖ್ಯೆ ಕಡಿಮೆ ಆಗುತ್ತದೆ ಎಂಬ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಇದರಿಂದ ಯಾವುದೇ ರೀತಿಯ ಸಮಸ್ಯೆ ಆಗುವುದಿಲ್ಲ. ಉಪ ಜಾತಿಯ ಕಾಲಂನಲ್ಲಿ ತಮ್ಮನ್ನು ಗುರುತಿಸಿಕೊಳ್ಳುವುದರಿಂದ ಒಕ್ಕಲಿಗ ಸಮುದಾಯದಲ್ಲಿ ಇರುವ ಉಪ ಜಾತಿಗಳ ನಿಖರ ಜನಸಂಖ್ಯೆ ಗೊತ್ತಾಗಲಿದೆ’ ಎಂದು ತಿಳಿಸಿದರು.

‘ಸಮೀಕ್ಷೆಯ ಸಂದರ್ಭದಲ್ಲಿ ಉಪ ಜಾತಿಯನ್ನು ಬರೆಯಿಸದೇ ಹೋದರೆ ನಮ್ಮ ಮುಂದಿನ ಪೀಳಿಗೆಗಳು ತಮ್ಮ ಮೂಲ ಜಾತಿಯನ್ನು ಮರೆತು ಬಿಡುತ್ತಾರೆ. ಸರ್ಕಾರಿ ದಾಖಲೆಗಳಲ್ಲಿ ಗಂಗಟಕಾರ್, ಮರಸು, ದಾಸ, ಹಳ್ಳಿಕಾರ್ ಹೀಗೆ ಅನೇಕ ಉಪಜಾತಿಗಳು ಕಣ್ಮರೆಯಾಗುವ ಸಾಧ್ಯತೆ ಇದೆ. ಉಪ ಜಾತಿಗಳನ್ನು ಗುರುತಿಸಲು ಪ್ರತ್ಯೇಕ ಸಮೀಕ್ಷೆಯನ್ನು ನಡೆಸುವುದಿಲ್ಲ. ಹಾಗಾಗಿ ಒಕ್ಕಲಿಗ ಸಮುದಾಯವರು ಎಚ್ಚೆತ್ತುಕೊಂಡು ತಮ್ಮ ಉಪ ಜಾತಿಗಳನ್ನು ಸಮೀಕ್ಷೆಯ ವೇಳೆ ಬರೆಯಿಸಬೇಕು’ ಎಂದ ಕರೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.