ಬೆಂಗಳೂರು: ಅಧಿಕಾರಕ್ಕೆ ಬಂದರೆ ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿತ್ತು. ಆದರೆ, ಇದುವರೆಗೂ ಕಾಯ್ದೆ ರದ್ದುಪಡಿಸಿಲ್ಲ. ಈ ಕಾಯ್ದೆಯನ್ನು ದುರುಪಯೋಗಪಡಿಸಿಕೊಂಡು ಕ್ರೈಸ್ತರ ಮೇಲೆ ಎಫ್ಐಆರ್ ದಾಖಲಿಸಲಾಗುತ್ತಿದೆ ಎಂದು ಕರ್ನಾಟಕ ಕ್ರೈಸ್ತ ಸಂಘಟನೆ ಆರೋಪಿಸಿದೆ.

ಸಂಘಟನೆಯ ಅಧ್ಯಕ್ಷ ಸ್ಟ್ಯಾನ್ಲಿ ಪಿಂಟೊ, ವಕೀಲೆ ಸಲೋಮಿ ಶಿರಿನ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಹಾವೇರಿಯಲ್ಲಿ ಜಮೀನಿನ ವಿವಾದವನ್ನು ತಿರುಚಿ ಮತಾಂತರ ದೂರು ನೀಡಲಾಗಿದೆ. ಸ್ಥಳದಲ್ಲೇ ಇಲ್ಲದ ವೃದ್ಧರು, ಮಹಿಳೆಯರನ್ನೆಲ್ಲ ಸೇರಿಸಿ 20 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ’ ಎಂದು ತಿಳಿಸಿದರು.

ಮನೆಗಳಲ್ಲಿ, ಚರ್ಚ್ಗಳಲ್ಲಿ ಪ್ರಾರ್ಥನೆ ಮಾಡುತ್ತಿರುವಾಗ ಕೆಲವು ಸಂಘಟನೆಗಳು ದಾಳಿ ಮಾಡಿ ಗಲಾಟೆ ನಡೆಸಿದ್ದಾರೆ. ಇದೆಲ್ಲ ಕಾಯ್ದೆಯ ದುರುಪಯೋಗವಾಗಿದೆ. ಹಾಗಾಗಿ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯಬೇಕು. ಧಾರ್ಮಿಕ ಸ್ವಾತಂತ್ರ್ಯವನ್ನು ರಕ್ಷಿಸುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕಾಯ್ದೆ ಹಿಂಪಡೆಯದೇ ಇದ್ದರೆ ಧಾರ್ಮಿಕ ಹಕ್ಕುಗಳ ರಕ್ಷಣೆಗಾಗಿ ರಾಜ್ಯಮಟ್ಟದಲ್ಲಿ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.