ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಬೆಂಗಳೂರು-ಮೈಸೂರು ಹೆದ್ದಾರಿ ಪರಿಶೀಲನೆ ನಡೆಸಲಿದ್ದಾರೆ.
ಬೆಳಗ್ಗೆ 10:30ಕ್ಕೆ ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ತೆರಳಿ ಮಂಡ್ಯದ ಅಮರಾವತಿ ಹೋಟೆಲ್ ಸಮೀಪ (ಬೆಂಗಳೂರಿನಿಂದ 93 ಕಿ.ಮೀ. ಅಂತರ) ಹಾಗೂ ಗಣಂಗೂರು ಟೋಲ್ ಪ್ಲಾಜಾ ಸಮೀಪ ಪರಿಶೀಲನೆ ನಡೆಸಲಿದ್ದಾರೆ.
ಅಪಘಾತ ತಡೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ಜತೆ ಸಿಎಂ ಚರ್ಚಿಸಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.