ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಪೇಗೌಡರ ಆದರ್ಶ ಪ್ರತಿಯೊಬ್ಬರಿಗೂ ಮಾದರಿ: ಡಿಸಿಎಂ ಡಿ.ಕೆ. ಶಿವಕುಮಾರ್

Published 28 ಜೂನ್ 2023, 15:38 IST
Last Updated 28 ಜೂನ್ 2023, 15:38 IST
ಅಕ್ಷರ ಗಾತ್ರ

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಕರುನಾಡ ವಿಜಯಸೇನೆ ಮಂಗಳವಾರ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ನಾಡಪ್ರಭು ಕೆಂಪೇಗೌಡರು ವಿಶ್ವವೇ ಗುರುತಿಸುವಂತೆ ಬೆಂಗಳೂರು ನಗರವನ್ನು ಕಟ್ಟಿ ಬೆಳೆಸಿದ್ದಾರೆ. ಇಂದು ಇಲ್ಲಿ ಕೋಟ್ಯಾಂತರ ಜನ ಅನ್ನ, ಉದ್ಯೋಗ ಮತ್ತು ಆಶ್ರಯ ಪಡೆದುಕೊಂಡಿದ್ದಾರೆ. ಜಾತಿ, ಭೇದವಿಲ್ಲದೆ ಎಲ್ಲರೂ ನೆಮ್ಮದಿಯಿಂದ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ ಎಂದು ಸ್ಮರಿಸಿದರು. 

ವಿಜಯಸೇನೆ ರಾಜ್ಯ ಘಟಕದ ಅಧ್ಯಕ್ಷ ಎಚ್.ಎನ್.ದೀಪಕ್, ‘ಕೆಂಪೇಗೌಡರ ಕಾಲದ ಕೆರೆಗಳನ್ನು ಸರ್ಕಾರ ಮತ್ತು ಸಾರ್ವಜನಿಕರು ಉಳಿಸಬೇಕಾಗಿದೆ’ ಎಂದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅನ್ನ ಸಂತರ್ಪಣೆಗೆ ಚಾಲನೆ ನೀಡಿದರು. ನಂಜಾವಧೂತ ಸ್ವಾಮೀಜಿ, ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT