ಭಾನುವಾರ, ನವೆಂಬರ್ 17, 2019
24 °C
ಏಕಾಂಗಿಯಾಗಿ ಎದುರಿಸಲು ದೇವೇಗೌಡರ ಇಂಗಿತ

ಜನವರಿ–ಫೆಬ್ರುವರಿಯಲ್ಲಿ ಮಧ್ಯಂತರ ಚುನಾವಣೆ: ಎಚ್‌.ಡಿ ದೇವೇಗೌಡ

Published:
Updated:
Prajavani

ಬೆಂಗಳೂರು: ರಾಜ್ಯ ವಿಧಾನಸಭೆಗೆ ಜನವರಿ ಅಥವಾ ಫೆಬ್ರುವರಿಯಲ್ಲಿ ಮಧ್ಯಂತರ ಚುನಾವಣೆ ನಡೆಯುವ ನಿರೀಕ್ಷೆ ಇದೆ ಎಂದು ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಹೇಳಿದರು.

‘ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ಒಳ್ಳೆಯ ಕೆಲಸ ಮಾಡಿದರೂ ನಮಗೆ ಸಹಕಾರ ಸಿಗಲಿಲ್ಲ. ಇನ್ನು ಮುಂದೆ ಆ ತಪ್ಪು ಮಾಡುವುದಿಲ್ಲ. ಎಲ್ಲ ಚುನಾವಣೆಗಳನ್ನು ಸ್ವತಂತ್ರವಾಗಿ ಎದುರಿಸೋಣ. ಕಾರ್ಯಕರ್ತರು ನನ್ನ ಜೊತೆ ಇದ್ದರೆ ಸಾಕು. ಮತ್ತೆ ಪಕ್ಷ ಅಧಿಕಾರಕ್ಕೆ ತರುತ್ತೇನೆ’ ಎಂದು ಅವರು ಸೋಮವಾರ ಇಲ್ಲಿ ಶಿವಮೊಗ್ಗ ಜಿಲ್ಲೆಯ ಪಕ್ಷದ ಕಾರ್ಯಕರ್ತರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ತಿಳಿಸಿದರು.

‘ಪಕ್ಷದಿಂದ ಬೆಳೆದು ಪಕ್ಷದ ಬಗ್ಗೆ ಕೆಲವರು ಮಾತನಾಡುತ್ತಿದ್ದಾರೆ. ಪಕ್ಷ ಬಿಟ್ಟು ಹೋಗುವವರ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ. ಪಕ್ಷ ಸಂಘಟನೆ ಮಾಡುವುದು ನನಗೆ ಗೊತ್ತಿದೆ. ಯಾರೇ ಪಕ್ಷ ತೊರೆದರೂ ಎದೆಗುಂದುವುದಿಲ್ಲ. ಕುಮಾರಸ್ವಾಮಿ ಮಾಡಿದ ಒಳ್ಳೆಯ ಕೆಲಸಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡಬೇಕಿದೆ’ ಎಂದರು.

‘ಕುಮಾರಸ್ವಾಮಿ ರಾಜ್ಯ ಪ್ರವಾಸ ಮಾಡಲಿದ್ದಾರೆ. ನಾನು ಸಹ ರಾಜ್ಯದ ಎಲ್ಲಾ ಜಿಲ್ಲಾ ಪ್ರವಾಸ ಕೈಗೊಂಡು ಪಕ್ಷ ಬಲಪಡಿಸುತ್ತೇನೆ’ ಎಂದರು.

ಪ್ರತಿಕ್ರಿಯಿಸಿ (+)