ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷತ್ರಿಯರಿಗೆ 50 ಕ್ಷೇತ್ರಗಳಲ್ಲಿ ಟಿಕೆಟ್ ನೀಡಬೇಕು: ಒಕ್ಕೂಟ ಒತ್ತಾಯ

Last Updated 23 ಫೆಬ್ರವರಿ 2023, 22:01 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕ್ಷತ್ರಿಯ ಸಮುದಾಯಕ್ಕೆ ಎಲ್ಲಾ ರಾಜಕೀಯ ಪಕ್ಷಗಳು ತಲಾ 50 ಕ್ಷೇತ್ರಗಳಲ್ಲಿ ಟಿಕೆಟ್ ನೀಡಬೇಕು ಎಂದು ಕರ್ನಾಟಕ ಕ್ಷತ್ರಿಯ ಒಕ್ಕೂಟ ಆಗ್ರಹಿಸಿದೆ.

‘ರಾಜ್ಯದಲ್ಲಿ ಕ್ಷತ್ರಿಯ ಸಮುದಾಯಗಳ 38 ಉಪಪಂಗಡಗಳಿದ್ದು, 1.15 ಕೋಟಿ ಜನಸಂಖ್ಯೆ ಇದೆ. 30ರಿಂದ 35 ಕ್ಷೇತ್ರಗಳಲ್ಲಿ ಪ್ರಬಲವಾಗಿದ್ದು, 60–70 ಕ್ಷೇತ್ರಗಳಲ್ಲಿ ನಮ್ಮ ಸಮುದಾಯ ನಿರ್ಣಾಯಕ ಪಾತ್ರ ವಹಿಸುತ್ತದೆ. ಈ ಸಮುದಾಯವನ್ನು ಎಲ್ಲಾ ರಾಜಕೀಯ ಪಕ್ಷಗಳು ನಿರ್ಲಕ್ಷ್ಯ ಮಾಡಿವೆ’ ಎಂದು ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಉದಯ್‌ ಸಿಂಗ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಈ ವಿಷಯವನ್ನು ನಮ್ಮ ಒಕ್ಕೂಟ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಎಲ್ಲಾ ಉಪಪಂಗಡಗಳ ಮುಖಂಡರು ಸಭೆ ನಡೆಸಿದ್ದೇವೆ. ಎಲ್ಲಾ ಪಕ್ಷಗಳಲ್ಲೂ ಕ್ಷತ್ರಿಯ ಸಮುದಾಯದ ಮುಖಂಡರಿದ್ದು, ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಅವರಿಗೆ ಅವಕಾಶ ನೀಡಬೇಕು. ನಿರ್ಲಕ್ಷ್ಯ ವಹಿಸಿದರೆ ಹೆಚ್ಚು ಪ್ರಾತಿನಿಧ್ಯ ನೀಡುವ ಪಕ್ಷಕ್ಕೆ ಬೆಂಬಲ ನೀಡುವ ನಿರ್ಣಯವನ್ನು ಒಕ್ಕೂಟ ಕೈಗೊಳ್ಳಲಿದೆ’ ಎಂದು ತಿಳಿಸಿದರು.

‘ಕ್ಷತ್ರಿಯ ಸಮುದಾಯದ ಮುಖಂಡರನ್ನು ಪಕ್ಷಕ್ಕಾಗಿ ದುಡಿಸಿಕೊಂಡು ಬಳಿಕ ಮೂಲೆಗುಂಪು ಮಾಡಲಾಗುತ್ತಿದೆ. ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದಲ್ಲಿ ಹೂಡಿ ವಿಜಯಕುಮಾರ್ ಅವರಿಗೆ ಟಿಕೆಟ್ ನೀಡುವ ಭರವಸೆಯನ್ನು ಬಿಜೆಪಿ ನೀಡಿತ್ತು. ಈಗ ಅಲ್ಲಿ ಬೇರೆ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಜ್ಜಾಗಿದೆ. ಈ ರೀತಿಯ ಅನ್ಯಾಯಗಳನ್ನು ಒಕ್ಕೂಟ ಸಹಿಸುವುದಿಲ್ಲ. ಹೂಡಿ ವಿಜಯಕುಮಾರ್‌ ಅವರಿಗೆ ಟಿಕೆಟ್ ಕೈ ತಪ್ಪಿದರೆ, ಅದರ ಪರಿಣಾಮವನ್ನು ಬಿಜೆಪಿ ಇಡೀ ರಾಜ್ಯದಲ್ಲಿ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT