ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೇಸ್‌ಕೋರ್ಸ್‌ ರಸ್ತೆಗೆ ನಟ ಅಂಬರೀಷ್‌ ಹೆಸರು: ವಾಣಿಜ್ಯ ಮಂಡಳಿ ಮನವಿ

Last Updated 12 ಜನವರಿ 2023, 20:05 IST
ಅಕ್ಷರ ಗಾತ್ರ

ಬೆಂಗಳೂರು: ಖ್ಯಾತ ನಟ ದಿವಂಗತ ಅಂಬರೀಷ್‌ ಅವರ ಹೆಸರನ್ನು ನಗರದ ರೇಸ್‌ಕೋರ್ಸ್‌ ರಸ್ತೆಗೆ ಇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಬಾ.ಮ. ಹರೀಶ್‌ ಅವರ ನೇತೃತ್ವದ ನಿಯೋಗವು ಗುರುವಾರ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರಿಗೆ ಮನವಿ ಸಲ್ಲಿಸಿದೆ.

ಕನ್ನಡ ಚಿತ್ರರಂಗದ ಸಾಧಕರಾದ ಡಾ.ರಾಜ್‌ಕುಮಾರ್, ಪಾರ್ವತಮ್ಮ ರಾಜ್‌ಕುಮಾರ್, ವಿಷ್ಣುವರ್ಧನ್ ಮತ್ತು ಪುನೀತ್ ರಾಜ್‌ಕುಮಾರ್ ಅವರ ಹೆಸರುಗಳನ್ನು ನಗರದ ಪ್ರಮುಖ ರಸ್ತೆಗಳಿಗೆ ಇರಿಸಲಾಗಿದೆ. ಅದಕ್ಕೆ ಕೃತಜ್ಞತೆ ಸಲ್ಲಿಸಿರುವ ನಿಯೋಗವು, ಅಂಬರೀಶ್ ಅವರಿಗೆ 70 ವರ್ಷಗಳು ಆದ ಸಂದರ್ಭದಲ್ಲಿ ಅವರ ಹೆಸರನ್ನು ರಾಮ್‌ ನಾರಾಯಣ ಚಲರಾಮ್ ಕಾಲೇಜ್‌ನಿಂದ ಮೌರ್ಯ ವೃತ್ತ ಮತ್ತು ಆನಂದರಾವ್ ವೃತ್ತದ ರಸ್ತೆವರೆಗೆ ನಾಮಕರಣ ಮಾಡಬೇಕು ಎಂದು ಮನವಿ ಮಾಡಿದೆ. ಈ ಮನವಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ನೀಡಲಾಗಿದೆ ಎಂದು ಬಾ.ಮ. ಹರೀಶ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT