ಬೆಂಗಳೂರು: ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ 1,600ಕ್ಕೂ ಅಧಿಕ ಹುದ್ದೆಗಳನ್ನು ತುಂಬುವ ಸಂಬಂಧ ಮುಖ್ಯಮಂತ್ರಿಗೆ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ಆರ್.ಎ.ಮುಂಡ್ಕುರ್ ಅಗ್ನಿಶಾಮಕ ತರಬೇತಿ ಅಕಾಡೆಮಿಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವಾ ಇಲಾಖೆ, ಗೃಹರಕ್ಷಕ ದಳ, ಪೌರರಕ್ಷಣೆ ಮತ್ತು ಎಸ್ಡಿಆರ್ಎಫ್ ಅಧಿಕಾರಿ, ಸಿಬ್ಬಂದಿಗೆ 'ಮುಖ್ಯಮಂತ್ರಿ ಪದಕ' ಪ್ರದಾನ ಹಾಗೂ 40 ಹೊಸ ಅಗ್ನಿಶಾಮಕ ಜಲ ವಾಹನಗಳನ್ನು ಹಸ್ತಾಂತರಿಸಿ ಮಾತನಾಡಿದರು.

ಖಾಲಿ ಹುದ್ದೆ ಭರ್ತಿ ಸಂಬಂಧ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಮುಖ್ಯಮಂತ್ರಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. 15ನೇ ಹಣಕಾಸಿನ ಯೋಜನೆಯಡಿ ₹329 ಕೋಟಿ ಒದಗಿಸಲಾಗಿತ್ತು. 21 ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ₹98 ಕೋಟಿ ಖರ್ಚು ಮಾಡಲಾಗಿದೆ. ಆಧುನಿಕ ಉಪಕರಣಗಳ ಖರೀದಿ, ತರಬೇತಿ ಕೇಂದ್ರದ ಉನ್ನತಿಕರಣಕ್ಕೆ ಕ್ರಮ ವಹಿಸಲಾಗಿದೆ ಎಂದರು.

ಇನ್ನೂ 15 ಹೊಸ ತಾಲ್ಲೂಕುಗಳಲ್ಲಿ ಅಗ್ನಿಶಾಮಕ ಠಾಣೆಗಳನ್ನು ಆರಂಭಿಸಲು ಕೋರಿ ಪ್ರಸ್ತಾವ ಸಲ್ಲಿಸಲಾಗಿದೆ. ಪೊಲೀಸ್ ಗೃಹ ಯೋಜನೆಯಡಿ 40 ಸಾವಿರ ಮನೆ ನಿರ್ಮಿಸಲಾಗಿದ್ದು, ಅದೇ ಮಾದರಿಯಲ್ಲಿ ಅಗ್ನಿಶಾಮಕ ಸಿಬ್ಬಂದಿಗೆ ವಸತಿ ಗೃಹ ಕಲ್ಪಿಸುವ ತೀರ್ಮಾನ ಮಾಡಲಾಗಿದೆ. ಇದಕ್ಕೆ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.

ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಉತ್ತಮ ಕೆಲಸದ ಮೂಲಕ ರಾಷ್ಟ್ರ ಮಟ್ಟದಲ್ಲಿ ಜನಮನ್ನಣೆ ಪಡೆದಿದೆ. ನಗರ ಪ್ರದೇಶಗಳಲ್ಲಿ ಹೆಚ್ಚಿನ ಅವಘಡಗಳು ಸಂಭವಿಸುತ್ತವೆ. ತುರ್ತು ಸಂದರ್ಭದಲ್ಲಿ ಪ್ರಾಣ ಒತ್ತೆ ಇಟ್ಟು, ಸಾರ್ವಜನಿಕರ ಆಸ್ತಿ ಮತ್ತು ನಾಗರಿಕರ ಪ್ರಾಣ ರಕ್ಷಣೆ ಮಾಡುವ ಕೆಲಸವನ್ನು ಸಿಬ್ಬಂದಿ ಮಾಡುತ್ತಿದ್ದಾರೆ. ಪ್ರವಾಹ ಸಂದರ್ಭದಲ್ಲಿ ಜೀವದ ಹಂಗು ತೊರೆದು ಜನರ ರಕ್ಷಣೆ ಮಾಡಿರುವುದನ್ನು ಮರೆಯುವಂತಿಲ್ಲ ಎಂದು ಹೇಳಿದರು.

ಮಡಿಕೇರಿಯಲ್ಲಿ ಸಂಭವಿಸಿದ ಪ್ರವಾಹದ ವೇಳೆ ಒಂಟಿ ಮನೆಗಳಲ್ಲಿದ್ದ ಜನರನ್ನು ರಕ್ಷಣೆ ಮಾಡಲು ತೆಗೆದುಕೊಂಡ ನಿರ್ಧಾರ ಮತ್ತು ಪ್ರಯತ್ನಗಳು ಅತ್ಯಂತ ಶ್ಲಾಘನೀಯ. ಇಲಾಖೆ ಕೆಲಸ ಸುಲಭ ಎಂದು ಹೇಳಲಾಗುವುದಿಲ್ಲ. ದೇಶದ ದಕ್ಷಿಣ ಭಾಗದ ರಾಜ್ಯಗಳಲ್ಲಿ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾ ನಿರ್ದೇಶಕ ಪ್ರಶಾಂತ್ ಕುಮಾರ್ ಠಾಕೂರ್, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಕೆ.ವಿ.ಶರತ್ ಚಂದ್ರ, ಐಪಿಎಸ್ ಅಧಿಕಾರಿ ಸವಿತಾ, ಸಂಚಾರ ವಿಭಾಗದ ಡಿಸಿಪಿ ಗೋಪಾಲ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.