ಮೂರು ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡುವ ಮೂಲಕ ಸರ್ಕಾರ ಜನಸಾಮಾನ್ಯರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದೆ. ಸತತವಾಗಿ ಬೆಲೆ ಏರಿಸುವ ಮೂಲಕ ಸರ್ಕಾರ ವಾಹನ ಸವಾರರ ಮೇಲೆ ಹೊರೆ ಹಾಕುತ್ತಿದೆ. ಎಲ್ಲ ಅಗತ್ಯ ವಸ್ತುಗಳ ಬೆಲೆಗಳು ಏರಿಕೆಯಾಗುತ್ತಿರುವ ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡುತ್ತಿರುವುದು ಜನರ ಬದುಕಿನ ಮೇಲೆ ಬರೆ ಎಳೆದಂತೆ. ಸರ್ಕಾರ ಈ ಬಗ್ಗೆ ಚಿಂತಿಸುವುದು ಅಗತ್ಯ.

ಚುನಾವಣೆ ನಂತರ ಬೆಲೆ ಏರಿಕೆ ಸೂಕ್ತವಲ್ಲ

ಕೆಲವೇ ದಿನಗಳಲ್ಲಿ ಮೂರು ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡನೀಯ. ಅಗತ್ಯ ವಸ್ತುಗಳ ಬೆಲೆ, ಅಡುಗೆ ಅನಿಲ, ವಾಣಿಜ್ಯ ಅನಿಲ ಬೆಲೆ ಏರಿಸಿರುವುದರಿಂದ ಮೊದಲೇ ಸಂಕಷ್ಟದಲ್ಲಿರುವ ಜನರಿಗೆ ಪೆಟ್ರೋಲ್, ಡೀಸೆಲ್ ಬೆಲೆಗಳ ಸತತ ಏರಿಕೆ ನಿಜಕ್ಕೂ ಮತ್ತಷ್ಟು ಸಂಕಷ್ನು ತಂದಿದೆ. ಹಲವು ರಾಜ್ಯಗಳಲ್ಲಿ ನಡೆದ ಚುನಾವಣೆ ಮುಗಿಯುವವರೆಗೂ ಸುಮ್ಮನಿದ್ದು ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡುತ್ತಿರುವುದು ಸರಿಯಾದ ಕ್ರಮವಲ್ಲ.

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏಕಾಏಕಿ ಮೂರು ಬಾರಿ ಹೆಚ್ಚಳ ಮಾಡಿರುವುದರಿಂದ ಜನಸಾಮಾನ್ಯರಿಗೆ ಸಾಕಷ್ಟು ತೊಂದರೆಯಾಗಿದೆ. ಮಧ್ಯಮ ವರ್ಗದವರು ಪ್ರತಿನಿತ್ಯವೂ ಒಂದಲ್ಲ ಒಂದು ಕೆಲಸಕ್ಕೆ ದ್ವಿಚಕ್ರ ವಾಹನ ಮತ್ತು ಕಾರು ಬಳಸುತ್ತಾರೆ. ಆದರೆ, ಏಕಾಏಕಿ ₹5 ಹೆಚ್ಚಳವಾದರೆ ಜೀವನ ನಡೆಸುವುದು ಹೇಗೆ? ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಿಂದ ಎಲ್ಲ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಲಿದೆ.

ಕೇಬಲ್ ಮಂಜುನಾಥ್, ಮಾನವ ಹಕ್ಕು ಮತ್ತು ಭ್ರಷ್ಟಾಚಾರ ವಿರೋಧ ಸಂಸ್ಥೆ ಅಧ್ಯಕ್ಷ

ಮಧ್ಯಪ್ರಾಚ್ಯದಲ್ಲಿ ಅಮೆರಿಕ, ಇಸ್ರೇಲ್, ಇರಾನ್ ನಡುವೆ ಯುದ್ಧ ನಡೆಯುತ್ತಿದೆ. ಈಗ ಪೆಟ್ರೋಲ್–ಡೀಸೆಲ್ ಬೆಲೆ ಅನಿವಾರ್ಯವಾಗಿ ಹೆಚ್ಚಳ ಆಗುತ್ತಿದೆ. ಮಧ್ಯಮ ವರ್ಗದವರಿಗೆ ಸಾಕಷ್ಟು ತೊಂದರೆಯಾಗಲಿದೆ. ಪ್ರತಿದಿನ ದುಡಿದು ಜೀವನ ನಡೆಸುವ ಕಾರ್ಮಿಕರಿಗೆ ಸಾಕಷ್ಟು ತೊಂದರೆ ಆಗಲಿದೆ. ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ತೊಂದರೆಯಾಗಲಿದೆ. ಏಕಾಏಕಿ ಎಲ್ಲ ಬೆಲೆ ಹೆಚ್ಚಳ ಮಾಡುವುದು ಸರಿಯಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.