ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ನಗರಕ್ಕೆ ಹೊಸ ರೂಪ: ಡಿಸಿಎಂ ಡಿಕೆಶಿ

Published 30 ಜನವರಿ 2024, 0:00 IST
Last Updated 30 ಜನವರಿ 2024, 0:00 IST
ಅಕ್ಷರ ಗಾತ್ರ

ಬೆಂಗಳೂರು: ‘ನಗರದ ಕೆಲವು ಭಾಗಗಳು ಮಾತ್ರ ಯೋಜಿತವಾಗಿ ನಿರ್ಮಾಣವಾಗಿವೆ. ನಾವು ಸಂಪೂರ್ಣ ನಗರಕ್ಕೆ ಬಜೆಟ್‌ ರೂಪಿಸಿ, ಬೆಂಗಳೂರಿಗೆ ಹೊಸ ರೂಪ ನೀಡಲು ಮುಂದಾಗಿದ್ದೇವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

ಬಿಬಿಎಂಪಿಯ 2024-25ನೇ ಸಾಲಿನ ಆಯವ್ಯಯಕ್ಕೆ ಸಂಬಂಧಿಸಿದಂತೆ ಡಿಸಿಎಂ, ನಗರ ವ್ಯಾಪ್ತಿಯ ಸಚಿವರು, ಶಾಸಕರು, ಸಂಸದರು, ವಿಧಾನ ಪರಿಷತ್ ಹಾಗೂ ರಾಜ್ಯಸಭೆ ಸದಸ್ಯರೊಂದಿಗೆ ಸೋಮವಾರ ಪೂರ್ವಭಾವಿ ಸಭೆ ನಡೆಸಿದರು.

‘ಸಂಚಾರ ದಟ್ಟಣೆ, ಕುಡಿಯುವ ನೀರು, ಘನತ್ಯಾಜ್ಯ ವಿಲೇವಾರಿ ಸಮಸ್ಯೆ ಇದೆ. 2013ರಿಂದ ಕುಡಿಯುವ ನೀರಿನ ದರ ಹೆಚ್ಚಳವಾಗಿಲ್ಲ. ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿಯಲ್ಲಿ ಶೇ 50ಕ್ಕಿಂತ ಹೆಚ್ಚು ಮಂದಿ ಸರಿಯಾದ ತೆರಿಗೆ ಪಾವತಿ ಮಾಡುತ್ತಿಲ್ಲ. 2020ರಲ್ಲಿ ಆಸ್ತಿ ತೆರಿಗೆ ಮಸೂದೆ ತಿದ್ದುಪಡಿ ಮಾಡಿದಾಗ ದಂಡದ ಪ್ರಮಾಣ ಹೆಚ್ಚಾಗಿದೆ. ಈ ಬಗ್ಗೆ ಯಾರೊಬ್ಬರೂ ಗಮನಹರಿಸಿಲ್ಲ’ ಎಂದರು.

‘ಯಾವುದೇ ಪಕ್ಷ, ನಾಯಕರು ಅನಧಿಕೃತ ಫ್ಲೆಕ್ಸ್ ಹಾಕಿದರೂ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಸುಪ್ರೀಂ ಕೋರ್ಟ್ ಆದೇಶದಂತೆ 6 ಟಿಎಂಸಿ ಅಡಿ ನೀರನ್ನು ಬೆಂಗಳೂರಿಗೆ ಬಳಸಲು ಸರ್ಕಾರಿ ಆದೇಶ ಹೊರಡಿಸಲಾಗಿದೆ. ನಗರದಲ್ಲಿ ಸಮಸ್ಯೆಗಳ ನಿವಾರಣೆಗೆ ಬಿಬಿಎಂಪಿ, ಬಿಡಿಎ, ಜಲಮಂಡಳಿ, ಬೆಸ್ಕಾಂ ಎಲ್ಲವೂ ಒಟ್ಟಾಗಿ ಕೆಲಸ ಮಾಡಬೇಕಿದೆ’ ಎಂದು ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT