ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾ.11ರಿಂದ ರಾಜ್ಯದಾದ್ಯಂತ ಸರ್ಕಾರಿ ಆಸ್ಪತ್ರೆಗಳ ಒಪಿಡಿ ಬಂದ್ ಮಾಡಿ ಮುಷ್ಕರ ನಡೆಸಲು ಆರೋಗ್ಯ, ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿ, ನೌಕರರು ನಿರ್ಧರಿಸಿದ್ದಾರೆ.

ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಕೇಂದ್ರ ಸಂಘ, ವೃಂದ ಸಂಘಗಳು ಘೋಷಿಸಿವೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವೂ ಇದಕ್ಕೆ ಬೆಂಬಲ ನೀಡಿದೆ.

ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ.ರವೀಂದ್ರನಾಥ ಎಂ.ಮೇಟಿ ಈ ವಿಷಯ ತಿಳಿಸಿದರು.

‘ಸರ್ಕಾರದಿಂದ ಲಿಖಿತವಾಗಿ ಸ್ಪಂದನೆ ಸಿಗದೇ ಇದ್ದರೆ ಮಾ.15ರವರೆಗೆ ಎಲ್ಲಾ ಜಿಲ್ಲಾ, ತಾಲ್ಲೂಕು ಆಸ್ಪತ್ರೆ, ಸಮುದಾಯ, ಪ್ರಾಥಮಿಕ ಆರೋಗ್ಯ ಕೇಂದ್ರ, ಡಿಸ್ಪೆನ್ಸರಿಗಳಲ್ಲಿ ಒಪಿಡಿ ಸ್ಥಗಿತಗೊಳಿಸುತ್ತೇವೆ. ಕಪ್ಪು ಪಟ್ಟಿ ಧರಿಸಿ ಬರೀ ತುರ್ತು ಸೇವೆ ಮಾತ್ರ ನಿರ್ವಹಿಸುತ್ತೇವೆ. 2ನೇ ಹಂತದಲ್ಲಿ ಮಾ.16ರಿಂದ ಗೈರು ಹಾಜರಾಗಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತೇವೆ. ಎಸ್ಮಾ ಜಾರಿ ಮಾಡಿದರೂ ಮುಷ್ಕರ ನಿಲ್ಲಿಸುವುದಿಲ್ಲ’ ಎಂದು ಎಚ್ಚರಿಸಿದರು.

‘ಈಗಾಗಲೇ ಹಲವು ಬಾರಿ ಸಭೆ ನಡೆಸಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದರೂ ಒಂದೇ ಒಂದು ಬೇಡಿಕೆಯೂ ಈಡೇರಿಲ್ಲ. ನಮ್ಮ ಬೇಡಿಕೆಗಳನ್ನು ಈಡೇರಿಸಲು ಇಲಾಖೆ ಮುಖ್ಯಸ್ಥರಿಂದ ಆಗುತ್ತಿಲ್ಲ. ಮುಖ್ಯಮಂತ್ರಿ ಅವರೇ ಮಧ್ಯಪ್ರವೇಶ ಮಾಡಬೇಕು’ ಎಂದು ಒತ್ತಾಯಿಸಿದರು.

‘ಇಲಾಖೆಯಲ್ಲಿ ಎ, ಬಿ, ಸಿ ವೃಂದದ ಜ್ಯೇಷ್ಠತಾ ಪಟ್ಟಿಯನ್ನೂ ಪ್ರಕಟಿಸಿಲ್ಲ. ವರ್ಗಾವಣೆಯ ಕೌನ್ಸೆಲಿಂಗ್ ಕೂಡ ಸರಿಯಾಗಿ ನಡೆಸದೇ ಪತಿ– ಪತ್ನಿಯನ್ನು ಬೇರೆ ಕಡೆ, ಅಂಗವಿಕಲರನ್ನು ದೂರಕ್ಕೆ ವರ್ಗಾವಣೆ ಮಾಡಲಾಗಿದೆ. ಮನವಿ ನೀಡಿದರೂ ಯಾವುದೇ ಬದಲಾವಣೆ ಆಗಿಲ್ಲ’ ಎಂದು ಹೇಳಿದರು.

ಎಲ್ಲ ಕಡೆ ಐಎಎಸ್ ಏಕೆ: ‘ಇಲಾಖೆಯ ಪ್ರಮುಖ ಹುದ್ದೆಗಳಿಗೆ ಐಎಎಸ್ ಅಧಿಕಾರಿಗಳನ್ನು ನೇಮಿಸಲಾಗುತ್ತಿದ್ದು, ಆರು ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಔಷಧ ಖರೀದಿ ವಿಭಾಗದಲ್ಲೂ ನಮ್ಮವರಿಗೆ ಅವಕಾಶವಿಲ್ಲ. ಒಂಬುಡ್ಸ್ಮನ್ ಕೂಡ ಐಎಎಸ್ ಅಧಿಕಾರಿಯೇ. ನಿರ್ದೇಶಕರ ಹುದ್ದೆಗೂ ಐಎಎಸ್ ಅಧಿಕಾರಿಯನ್ನು ತರುವ ಹುನ್ನಾರ ನಡೆದಿದೆ. ಸಿಜೇರಿಯನ್ ಅನ್ನು ಐಎಎಸ್ ಅಧಿಕಾರಿಗಳೇ ಮಾಡಲಿ’ ಎಂದು ಹೇಳಿದರು.

ವೈದ್ಯಾಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ಪಿ.ಆರ್.ತಿಮ್ಮರಾಜು, ನೌಕರರ ಕೇಂದ್ರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ, ಪ್ರಧಾನ ಕಾರ್ಯದರ್ಶಿ ಪುಟ್ಟರಾಜು, ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಗಿರಿಗೌಡ, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷೆ ಚಂದ್ರಿಕಾ ದಮ್ಮಳ್ಳಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.