ಮಂಗಳವಾರ, ಆಗಸ್ಟ್ 3, 2021
24 °C

ಬಿಬಿಎಂಪಿ ಆಯುಕ್ತ ಬಿ.ಎಚ್‌. ಅನಿಲ್‌ ಕುಮಾರ್ ಎತ್ತಂಗಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ಕೋವಿಡ್‌ 19 ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೆ, ಬಿಬಿಎಂಪಿ ಆಯುಕ್ತ ಬಿ.ಎಚ್‌. ಅನಿಲ್‌ ಕುಮಾರ್‌ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಶನಿವಾರ ಎತ್ತಂಗಡಿ ಮಾಡಿದೆ.

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್‌. ಮಂಜುನಾಥ್‌ ಪ್ರಸಾದ್‌ ಅವರಿಗೆ ಬಿಬಿಎಎಂಪಿ ಆಯುಕ್ತ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಮಂಜುನಾಥ್ ಪ್ರಸಾದ್‌ ಅವರು ಈ ಹಿಂದೆ ಬಿಬಿಎಂಪಿ ಆಯುಕ್ತರಾಗಿದ್ದರು.

ಅನಿಲ್‌ ಕುಮಾರ್ ಅವರನ್ನು ಸಾರ್ವಜನಿಕ ಉದ್ದಿಮೆಗಳ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಈ ಹುದ್ದೆಯನ್ನು ವಹಿಸಿಕೊಂಡಿದ್ದ ವಿ. ರಶ್ಮಿ ಮಹೇಶ್‌ ಅವರನ್ನು ಕನ್ನಡ ಮತ್ತು ಸಂಸ್ಕೃತಿಕ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು