ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಸಿಕೆಯಿಂದ ಕೋವಿಡ್ ತೀವ್ರತೆ ತಗ್ಗಲಿದೆ: ರಾಜ್ಯಪಾಲ ಥಾವರಚಂದ್ ಗೆಹಲೋತ್

ಬೂಸ್ಟರ್‌ ಡೋಸ್ ಲಸಿಕೆ ಪಡೆದ ರಾಜ್ಯಪಾಲ ಥಾವರಚಂದ್ ಗೆಹಲೋತ್
Last Updated 14 ಜನವರಿ 2022, 17:01 IST
ಅಕ್ಷರ ಗಾತ್ರ

ಬೆಂಗಳೂರು: ‘ಕೊರೊನಾ ಸೋಂಕಿನ ತೀವ್ರತೆಯನ್ನು ತಗ್ಗಿಸಲು ಲಸಿಕೆಯೊಂದೇ ಪರಿಹಾರ. ರಾಜ್ಯದ ಪ್ರತಿಯೊಬ್ಬರೂ ಕಡ್ಡಾಯವಾಗಿ ಲಸಿಕೆ ಪಡೆದುಕೊಳ್ಳಬೇಕು’ ಎಂದು ರಾಜ್ಯಪಾಲಥಾವರಚಂದ್ ಗೆಹಲೋತ್ ಮನವಿ ಮಾಡಿಕೊಂಡರು.

ಅವರು ಇಲ್ಲಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೂಸ್ಟರ್ ಡೋಸ್ ಲಸಿಕೆ ಪಡೆದುಕೊಂಡು, ಮಾತನಾಡಿದರು. ‘ನವದೆಹಲಿಯಲ್ಲಿ ಕೋವಿಡ್ ಲಸಿಕೆಯ ಎರಡು ಡೋಸ್‌ಗಳನ್ನು ಹಾಕಿಸಿಕೊಂಡಿದ್ದೆ. ಸೋಂಕಿನಿಂದ ರಕ್ಷಣೆ ಪಡೆಯಲು ಮುನ್ನೆಚ್ಚರಿಕಾ ಡೋಸ್ ಲಸಿಕೆಯೊಂದಿಗೆ ಪ್ರಮಾಣ ಪತ್ರವನ್ನು ಪಡೆದುಕೊಂಡಿದ್ದೇನೆ. ಲಸಿಕೆ ವಿತರಣೆಯಲ್ಲಿ ಕರ್ನಾಟಕ ಉತ್ತಮ ಸಾಧನೆ ಮಾಡಿದೆ’ ಎಂದು ಹೇಳಿದರು.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ‘ಲಸಿಕೆಯಿಂದ ಮಾತ್ರ ಕೋವಿಡ್ ನಿಯಂತ್ರಣ ಸಾಧ್ಯ. ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಈವರೆಗೆ 83,937 ಡೋಸ್‌ಗಳಷ್ಟು ಲಸಿಕೆ ವಿತರಿಸಲಾಗಿದೆ. ಇಲ್ಲಿ420 ಬಾಣಂತಿಯರು ಹಾಗೂ 1,179 ಗರ್ಭಿಣಿಯರು ಲಸಿಕೆ ಪಡೆದುಕೊಂಡಿದ್ದಾರೆ. ಆರೋಗ್ಯ ಸಿಬ್ಬಂದಿ ಸೇರಿದಂತೆ ಅರ್ಹರು ಮುನ್ನೆಚ್ಚರಿಕೆ ಡೋಸ್ ಲಸಿಕೆಯನ್ನು ಪಡೆಯಬೇಕು’ ಎಂದು ತಿಳಿಸಿದರು.

ವಾಣಿವಿಲಾಸ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕಿ ಡಾ. ಗೀತಾ ಶಿವಮೂರ್ತಿ, ಮಿಂಟೊ ಕಣ್ಣಿನ ಆಸ್ಪತ್ರೆ ನಿರ್ದೇಶಕಿ ಡಾ. ಸುಜಾತ ರಾಥೋಡ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT