ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಲಕ್ಷ್ಮಿ ಹೆಬ್ಬಾಳಕರಗೆ ನಿಂದಿಸಿದ ಪ್ರಕರಣ: ಮಾರ್ಗಮಧ್ಯೆ ಸಿ.ಟಿ. ರವಿ ಬಿಡುಗಡೆ

Published : 20 ಡಿಸೆಂಬರ್ 2024, 15:32 IST
Last Updated : 20 ಡಿಸೆಂಬರ್ 2024, 15:32 IST
ಫಾಲೋ ಮಾಡಿ
Comments
ಸತ್ಯಕ್ಕೆ ಜಯ ದೊರೆತಿದೆ. ಕಾಂಗ್ರೆಸ್ ಸರ್ಕಾರ ಪೊಲೀಸ್ ಬಲ ಉಪಯೋಗಿಸಿಕೊಂಡು ಮಾನಸಿಕವಾಗಿ ಕುಗ್ಗಿಸಲು ಮುಂದಾದರೂ ನಾನು ಎಳ್ಳಷ್ಟೂ ಕುಗ್ಗುವುದಿಲ್ಲ.
–ಸಿ.ಟಿ.ರವಿ, ವಿಧಾನ ಪರಿಷತ್ ಸದಸ್ಯ
ಬೆಂಬಲಕ್ಕೆ ನಿಂತ ಬಿಜೆಪಿ ನಾಯಕರು
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ, ಶಾಸಕ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ ಸೇರಿದಂತೆ ಹಲವರು ಗುರುವಾರ ರಾತ್ರಿಯೇ ಖಾನಾಪೂರ ಪೊಲೀಸ್‌ ಠಾಣೆಗೆ ಭೇಟಿನೀಡಿ ರವಿ ಅವರ ಬೆಂಬಲಕ್ಕೆ ನಿಂತಿದ್ದರು. ಬಂಧಿತ ವಿಧಾನ ಪರಿಷತ್‌ ಸದಸ್ಯನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆಯನ್ನೂ ನಡೆಸಿದ್ದರು. ದೆಹಲಿ ಪ್ರವಾಸದಲ್ಲಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶುಕ್ರವಾರ ಬೆಳಿಗ್ಗೆಯೇ ಬೆಳಗಾವಿಗೆ ದೌಡಾಯಿಸಿದರು. ವಿಜಯೇಂದ್ರ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ನ್ಯಾಯಾಲಯದಲ್ಲೂ ಜೊತೆಗಿದ್ದು ತಮ್ಮ ಪಕ್ಷದ ಶಾಸಕನನ್ನು ಬೆಂಬಲಿಸಿದರು.
ಸಿ.ಟಿ ರವಿ ಅವರು ಚಿಂತಕರ ಚಾವಡಿಯಲ್ಲಿ ‘ಆ’ ಮಾತು ಬಳಸಿದ್ದು ನಿಜ. ನಾನು ಇಡೀ ರಾಜ್ಯದ ಮಹಿಳೆಯರ ಪ್ರತಿನಿಧಿ. ನಾನೇಕೆ ಸುಳ್ಳು ಹೇಳಲಿ.
–ಲಕ್ಷ್ಮೀ ಹೆಬ್ಬಾಳಕರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ
ಲಕ್ಷ್ಮೀ ಬೆಂಬಲಕ್ಕೆ ಕೈ ಪಡೆ
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಕಾಂಗ್ರೆಸ್‌ ಪಕ್ಷದ ಬಹುತೇಕ ನಾಯಕರು, ಮುಖಂಡರು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಬೆಂಬಲಕ್ಕೆ ನಿಂತಿದ್ದಾರೆ. ಮಂಡ್ಯದಲ್ಲಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ‘ಯಾವ ಹೆಣ್ಣು ಮಕ್ಕಳೂ ಇಂತಹ ವಿಚಾರದಲ್ಲಿ ಸುಳ್ಳು ಹೇಳುವುದಿಲ್ಲ. ಅವಾಚ್ಯ ಪದ ಬಳಸದೇ ಇದ್ದರೆ ರವಿ ಅವರ ಬಂಧನ ಏಕೆ ಆಗುತ್ತಿತ್ತು’ ಎಂದು ಪ್ರಶ್ನಿಸಿದರು. ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಶಿವಕುಮಾರ್, ‘ರವಿ 12 ಬಾರಿ ಆ ಪದದಿಂದ ಲಕ್ಷ್ಮೀ ಅವರನ್ನು ನಿಂದಿಸಿದ್ದಾನೆ. ನಿಮ್ಮ ಬಳಿ ದಾಖಲೆ ಇಲ್ಲದಿದ್ದರೆ ಹೇಳಿ, ನಾನೇ ಕೊಡುತ್ತೇನೆ’ ಎಂದರು.
ಒಂದೇ ದಿನ ಮೂರು ಕಡೆ ವಿಚಾರಣೆ
ಸಿ.ಟಿ. ರವಿ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಒಂದು ಮತ್ತು ಬೆಂಗಳೂರಿನ ಎರಡು ನ್ಯಾಯಾಲಯಗಳಲ್ಲಿ ಶುಕ್ರವಾರ ಒಂದೇ ದಿನ ವಿಚಾರಣೆ ನಡೆಯಿತು. ಬೆಳಗಾವಿಯ ಐದನೇ ಜೆಎಂಎಫ್‌ ನ್ಯಾಯಾಲಯದಲ್ಲಿ ಮಧ್ಯಾಹ್ನ ದವರೆಗೂ ವಿಚಾರಣೆ ನಡೆದರೆ, ಮಧ್ಯಾಹ್ನದ ಬಳಿಕ ಪ್ರಕರಣ ಬೆಂಗಳೂರಿನ ನ್ಯಾಯಾಲಯಗಳಿಗೆ ವರ್ಗಾವಣೆ ಆಯಿತು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಧ್ಯಂತರ ಜಾಮೀನು ಕೋರಿದ್ದ ಅರ್ಜಿಯ ವಿಚಾರಣೆ ನಡೆಸಿತು. ಹೈಕೋರ್ಟ್‌ನಲ್ಲಿ ಪ್ರಕರಣಕ್ಕೆ ತಡೆ ಕೋರಿದ್ದ ಅರ್ಜಿಯ ವಿಚಾರಣೆ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT