ಬೆಂಗಳೂರು: ರಾಜ್ಯದ ವಿವಿಧೆಡೆ ಗುರುವಾರದಿಂದ ಮುಂದಿನ ಐದು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಗದಗ, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗೆ ಗುರುವಾರ ಹಾಗೂ ಶುಕ್ರವಾರ ‘ಆರೆಂಜ್ ಅಲರ್ಟ್’ ನೀಡಲಾಗಿದ್ದು, ಈ ಜಿಲ್ಲೆಗಳ ಕೆಲವೆಡೆ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ. ಉಳಿದ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ.

ಕೊಡಗು, ಹಾಸನ, ಚಿಕ್ಕಮಗಳೂರು, ಬಳ್ಳಾರಿ, ದಾವಣಗೆರೆ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ ಮತ್ತು ವಿಜಯನಗರ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-51-258967063

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.