ಶನಿವಾರ, ಫೆಬ್ರವರಿ 22, 2020
19 °C

ಉಪ ಲೋಕಾಯುಕ್ತ–ಸಮ್ಮತಿ ನೀಡಿರಲಿಲ್ಲ: ಹೈಕೋರ್ಟ್‌ ಸಿ.ಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರನ್ನು ಉಪ ಲೋಕಾಯುಕ್ತರನ್ನಾಗಿ ನೇಮಕ ಮಾಡುವ ಮುನ್ನ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳು ಅನುಮತಿ ನೀಡಿಲ್ಲ’ ಎಂಬ ಅಂಶ ಬಹಿರಂಗವಾಗಿದೆ.

ಈ ಕುರಿತಂತೆ ಮಾಹಿತಿ ಹಕ್ಕು ಕಾಯ್ದೆ ಅಡಿ ವಿವರ ಒದಗಿಸುವಂತೆ, ನಗರದ ಬನಶಂಕರಿ ಬಡಾವಣೆ ನಿವಾಸಿ ಡಾ.ಕೆ.ಶಿವರಾಂ ಕೇಳಿದ್ದ ವಿವರಣೆಗೆ ರಾಜ್ಯ ಮಾಹಿತಿ ಅಧಿಕಾರಿಯೂ ಆದ ಹೈಕೋರ್ಟ್‌ನ ಜಂಟಿ ನಿರ್ದೇಶಕರು ಶನಿವಾರ ನೀಡಿರುವ ಮಾಹಿತಿಯಲ್ಲಿ ತಿಳಿಸಿದ್ದಾರೆ.

‘ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರನ್ನು ಉಪ ಲೋಕಾಯುಕ್ತ ಹುದ್ದೆಗೆ ನೇಮಕ ಮಾಡುವ ಮುನ್ನ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳು ಸಮ್ಮತಿ ನೀಡಿದ ಪ್ರತಿಯನ್ನು ಒದಗಿಸಿ’ ಎಂದು ಕೇಳಲಾದ ಮಾಹಿತಿಗೆ, ‘ಅಂತಹ ಯಾವುದೇ ಸಮ್ಮತಿ ಪತ್ರವನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ನೀಡಿರುವುದಿಲ್ಲ’ ಎಂದು ತಿಳಿಸಲಾಗಿದೆ.

14 ವರ್ಷಗಳ ಕಾಲ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದ ಪಾಟೀಲ ಅವರು 2019ರ ನ.21ರಂದು ಉಪಲೋಕಾಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು