ವಿಪತ್ತು ನಿರ್ವಹಣೆ: ಅಫಿಡವಿಟ್ ಸಲ್ಲಿಸಲು ಸೂಚನೆ

ಬೆಂಗಳೂರು: ರಾಜ್ಯದಲ್ಲಿ ವಿಪತ್ತು ತಡೆ ಮತ್ತು ನಿರ್ವಹಣಾ ನಿಧಿ ಸ್ಥಾಪನೆ ಸಂಬಂಧ ಕೈಗೊಂಡ ಕ್ರಮಗಳ ಕುರಿತು ಅಫಿಡವಿಟ್ ಸಲ್ಲಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
‘2019ರ ಜುಲೈನಿಂದ ಈ ನಿಟ್ಟಿನಲ್ಲಿ ಹೊರಬಿದ್ದ ಆದೇಶಗಳು ಪಾಲನೆಯಾಗಿಲ್ಲ. ವಿಪತ್ತು ನಿರ್ವಹಣಾ ಕಾಯ್ದೆಯ ನಿಬಂಧನೆಗಳನ್ನು ಅನುಷ್ಠಾನಗೊಳಿಸುವಲ್ಲಿಯೂ ಸರ್ಕಾರ ವಿಫಲವಾಗಿದೆ’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.
‘2005ರ ವಿಪತ್ತು ನಿರ್ವಹಣಾ ಕಾಯ್ದೆ ಪ್ರಕಾರ ಕೋವಿಡ್ ಅನ್ನು ವಿಪತ್ತು ಎಂದು ಒಪ್ಪಿಕೊಂಡರೂ ಅದಕ್ಕೆ ತಕ್ಕಂದ ನಿಬಂಧನೆಗಳನ್ನು ಜಾರಿಗೆ ತರಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಅದು ಕಾಗದದಲ್ಲೇ ಉಳಿಯಿತು’ ಎಂದು ಪೀಠ ಹೇಳಿತು.
ಈ ಸಂಬಂಧ ಅನುಪಾಲನಾ ವರದಿ ಸಲ್ಲಿಸುವಂತೆ ತಿಳಿಸಿದ ಪೀಠ, ಜ.27ಕ್ಕೆ ವಿಚಾರಣೆ ಮುಂದೂಡಿತು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.