ಕೋವಿಡ್ ನಿಯಮ ಪಾಲಿಸದಿದ್ದರೆ ಕ್ರಮ ಕೈಗೊಳ್ಳಿ: ಹೈಕೋರ್ಟ್
ಬೆಂಗಳೂರು: ಶನಿವಾರದ ಕರ್ನಾಟಕ ಬಂದ್ ಸಂದರ್ಭದಲ್ಲಿ ಮಾಸ್ಕ್ ಧರಿಸದ ಮತ್ತು ಅಂತರ ಕಾಪಾಡದವರಿಗೆ ದಂಡ ವಿಧಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಬಂದ್ ಎಂದರೆ ಸಹಜವಾಗಿ ಜನಸಮೂಹ ಸೇರುತ್ತದೆ. ಈ ಸಂದರ್ಭದಲ್ಲಿ ನಿಯಮ ಉಲ್ಲಂಘನೆ ಆಗುವುದನ್ನು ತಡೆಯಲು ಪೊಲೀಸರು ಮತ್ತು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಹೇಳಿತು.
ರಾಜಕೀಯ ರ್‍ಯಾಲಿಗಳಲ್ಲಿ ಭಾಗವಹಿಸಿ ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಿರುವ ಅಂಕಿ–ಅಂಶ ಸಲ್ಲಿಸದ ಮತ್ತು ಅವರನ್ನು ವಿಚಾರಣೆಗೆ ಒಳಪಡಿಸದ ಸರ್ಕಾರವನ್ನು ಪೀಠ ತರಾಟೆಗೆ ತೆಗೆದುಕೊಂಡಿತು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.