ಬೆಂಗಳೂರು: ಹೈಕೋರ್ಟ್ನ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರ ಪುತ್ರ ಅರುಣ್ ಅವಧಾನಿ (41) ಭಾನುವಾರ ಮಧ್ಯರಾತ್ರಿ ನಿಧನ ಹೊಂದಿದ್ದಾರೆ.

ಅವರು ಪತ್ನಿ ಹಾಗೂ 11 ವರ್ಷದ ಪುತ್ರನನ್ನು ಅಗಲಿದ್ದಾರೆ.

‘ಅರುಣ್ ಅವರಿಗೆ ಇಬ್ಬರು ಸಹೋದರಿಯರಿದ್ದು ಒಬ್ಬರು ಅಮೆರಿಕ ಮತ್ತೊಬ್ಬರು ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ. ಅಂತ್ಯಕ್ರಿಯೆ ನಾಳೆ (ಮಂಗಳವಾರ) ಸಂಜೆ ಅಥವಾ ನಾಡಿದ್ದು (ಬುಧವಾರ) ನಡೆಯಲಿದೆ. ಅಲ್ಲಿಯವರೆಗೂ ಪಾರ್ಥಿವ ಶರೀರವನ್ನು ಬನ್ನೇರುಘಟ್ಟ ರಸ್ತೆಯಲ್ಲಿರುವ ಸಾಗರ್ ಆಸ್ಪತ್ರೆಯಲ್ಲಿ ಇರಿಸಲಾಗುವುದು‘ ಎಂದು ಕುಟುಂಬದ ಆಪ್ತ ಮೂಲಗಳು ತಿಳಿಸಿವೆ.

ಹೆಚ್ಚಿನ ವಿವರಕ್ಕೆ ವಕೀಲ ಎಂ.ದೇವರಾಜ್ ಅವರ 98450-71935 ಮೊಬೈಲ್ ದೂರವಾಣಿಗೆ ಸಂಪರ್ಕಿಸಬಹುದು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಶಾಸಕ ಆರ್. ಅಶೋಕ, ಎಸ್.ಟಿ. ಸೋಮಶೇಖರ್ ಸೇರಿದಂತೆ ಅನೇಕ ಹಿರಿ-ಕಿರಿಯ ವಕೀಲರು ಅಂತಿಮ ದರ್ಶನ ಪಡೆದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.