ಟ್ವಿಟರ್ ಪ್ರಕರಣ: ಸಮಯ ಕೋರಿಕೆಗೆ ಕೋರ್ಟ್ ಬೇಸರ

ಬೆಂಗಳೂರು: ‘ಮಾಹಿತಿ ತಂತ್ರಜ್ಞಾನ (ಐ.ಟಿ) ಕಾಯ್ದೆ-2000ದ ಕಲಂ 69ಎ ಗೆ ವಿರುದ್ಧವಾಗಿರುವ 1,400ಕ್ಕೂ
ಹೆಚ್ಚು ಟ್ವಿಟರ್ ಖಾತೆಗಳನ್ನು ತಡೆಹಿಡಿಯಬೇಕು’ ಎಂಬ ನೋಟಿಸ್ ಪ್ರಶ್ನಿಸಿ 'ಟ್ವಿಟರ್' ಕಂಪನಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದ ವಿಚಾರಣೆಯಲ್ಲಿ ಕೇಂದ್ರದ ಪರ ವಕೀಲರು ಪದೇ ಪದೇ ಕಾಲಾವಕಾಶಕ್ಕೆ ಮನವಿ ಮಾಡುತ್ತಿರುವುದಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಈ ಕುರಿತಂತೆ 'ಟ್ವಿಟರ್' ಕಂಪನಿಯ ಬೆಂಗಳೂರಿನ ಪ್ರತಿನಿಧಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಕೇಂದ್ರ ಸರ್ಕಾರದ ವಕೀಲರು, ‘ವಿಚಾರಣೆಯನ್ನು ಇದೇ 27 ಅಥವಾ ಫೆಬ್ರುವರಿ 3ಕ್ಕೆ ಮುಂದೂಡಬೇಕು’ ಎಂದು ಕೋರಿದರು.
ಇದನ್ನು ಒಪ್ಪದ ನ್ಯಾಯಪೀಠ, ‘ಸುಪ್ರೀಂ ಕೋರ್ಟ್ ಈ ಅರ್ಜಿಯನ್ನು ತ್ವರಿತವಾಗಿ ವಿಚಾರಣೆ ನಡೆಸಿ ತೀರ್ಪು ನೀಡುವಂತೆ ನಿರ್ದೇಶನ ನೀಡಿದೆ. ನೀವು ಕೇಳಿದಂತೆ ಪದೇ ಪದೇ ಮುಂದೂಡಲಾಗದು’ ಎಂದು ಹೇಳಿ ಇದೇ 18ಕ್ಕೆ ವಿಚಾರಣೆ ನಿಗದಿಪಡಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.