ಬೆಂಗಳೂರು: ವಿದ್ಯಾರ್ಥಿಗಳು ಶಾಲೆಗೆ ತಡವಾಗಿ ಬಂದಿದ್ದಾರೆ ಎಂಬ ಕಾರಣಕ್ಕೆ ಬಸ್ಕಿ ಹೊಡೆಸುವ, ಶಾಲೆಯ ಆವರಣ ಸುತ್ತು ಹಾಕುವ ಶಿಕ್ಷೆ ನೀಡಿದ ಆರೋಪದಡಿ ಶಾಲೆಯ ಪ್ರಾಂಶುಪಾಲರು ಮತ್ತು ಇತರೆ ಮೂವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.

ಈ ಸಂಬಂಧ ಯಲಹಂಕದ ಚೈತನ್ಯ ಟೆಕ್ನೋ ಶಾಲೆಯ ಪ್ರಾಂಶುಪಾಲರಾದ ಮೀನಾಕ್ಷಿ ವಿನೋದಿನಿ, ಶಿಕ್ಷಕರಾದ ನರೇಶ್, ಕೆ.ಭರತ್ ಕುಮಾರ್ ಮತ್ತು ಎಸ್.ಶ್ರೀನಿವಾಸ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ಹೈಕೋರ್ಟ್ ವಕೀಲ ಅರ್ನವ್ ಬಾಗಲವಾಡಿ ಅವರ ವಾದ ಆಲಿಸಿದ ನ್ಯಾಯಪೀಠ ವಿಚಾರಣೆಗೆ ಮಧ್ಯಂತರ ತಡೆ ನೀಡಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.

ಪ್ರಕರಣವೇನು?: 'ಏಳನೇ ತರಗತಿಯಿಂದ 10ನೇ ತರಗತಿಯ ಏಳು ವಿದ್ಯಾರ್ಥಿಗಳು ಇದೇ 13ರಂದು ಶಾಲೆಗೆ ತಡವಾಗಿ ಬಂದಿದ್ದಾರೆ ಎಂಬ ಕಾರಣಕ್ಕೆ ಅವರನ್ನು ತರಗತಿಗೆ ಸೇರಿಸದೇ ಆವರಣದಲ್ಲಿ ನಿಲ್ಲಿಸಲಾಗಿತ್ತು’ ಎಂದು ಯಲಹಂಕ ಉಪನಗರದ ತಿರುಮಲ ನಗರದ ಚೈತನ್ಯ ಟೆಕ್ನೋ ಶಾಲೆಯ ವಿರುದ್ಧ ಆರೋಪ ಹೊರಿಸಲಾಗಿದೆ.

‘ಪ್ರಾಂಶುಪಾಲರಾದ ಮೀನಾಕ್ಷಿ ವಿನೋದಿನಿ, ನರೇಶ್, ಶಿಕ್ಷಕ ಭರತ್, ಶ್ರೀನಿವಾಸ್ ಮಕ್ಕಳಿಗೆ ಶಿಕ್ಷೆ ನೀಡಿದ್ದಾರೆ’ ಎಂಬ ಏಳು ಸಂತ್ರಸ್ತ ವಿದ್ಯಾರ್ಥಿಗಳ ಆರೋಪವನ್ನು ಆಧರಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಪೊಲೀಸರಿಗೆ ದೂರು ನೀಡಿದ್ದರು.

ಈ ದೂರಿನ ಅನ್ವಯ ಯಲಹಂಕ ನ್ಯೂ ಟೌನ್ ಠಾಣೆಯ ಪೊಲೀಸರು ಅರ್ಜಿದಾರರ ವಿರುದ್ಧ ಬಾಲನ್ಯಾಯ ಕಾಯ್ದೆಯ ಕಲಂ 75, ಭಾರತೀಯ ನ್ಯಾಯ ಸಂಹಿತೆಯ ಕಲಂಗಳಾದ 115(2), 352 ಜೊತೆಗೆ 3(5)ರ ಅಡಿ ಪ್ರಕರಣ ದಾಖಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.