ಬೆಂಗಳೂರು: ಅರಣ್ಯ ಉತ್ಪನ್ನಗಳ ಸಾಗಾಣಿಕೆ ಪರವಾನಗಿ ಶುಲ್ಕವನ್ನು ಒಂದು ಆರ್ಥಿಕ ವರ್ಷದಲ್ಲಿ ₹10 ಸಾವಿರದಿಂದ ₹20 ಸಾವಿರಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಈ ಸಂಬಂಧ ಆಲ್ ಕೇರಳ ಸಾಮಿಲ್ ಅಂಡ್ ವುಡ್ ಇಂಡಸ್ಟ್ರೀಸ್ ಓನರ್ಸ್ ಅಸೋಸಿಯೇಷನ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ದಿ ಫೆಡರೇಷನ್ ಆಫ್ ಕರ್ನಾಟಕ ಟಿಂಬರ್ ಮರ್ಚಂಟ್ಸ್ ಅಂಡ್ ಸಾಮಿಲ್ಲರ್ಸ್ ಸಲ್ಲಿಸಿರುವ ಅರ್ಜಿಯಲ್ಲಿ ರಾಜ್ಯ ಸರ್ಕಾರದ ಆದೇಶಕ್ಕೆ ಈಗಾಗಲೇ ಮಧ್ಯಂತರ ತಡೆ ನೀಡಿದೆ. ಈ ಅರ್ಜಿಯಲ್ಲೂ ಅದು ಆದೇಶ ಅನ್ವಯವಾಗಲಿದೆ ಎಂದು ಉಲ್ಲೇಖಿಸಿ ಮಧ್ಯಂತರ ತಡೆ ನೀಡಿತು.

ಪ್ರತಿವಾದಿಗಳಾದ ಅರಣ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು.

ಕರ್ನಾಟಕ ಅರಣ್ಯ ಅಧಿನಿಯಮ 1969ರ ನಿಯಮ 53ರಡಿ ಪರವಾನಿಗೆ ಶುಲ್ಕ ಪರಿಷ್ಕರಿಸಿ 2023ರ ನವೆಂಬರ್ 17 ಹಾಗೂ 2024ರ ಏಪ್ರಿಲ್ 1ರಂದು ಹೊರಡಿಸಲಾಗಿರುವ ಅಧಿಸೂಚನೆಗಳನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.

‘2013ರಿಂದ ಇಲ್ಲಿವರೆಗೆ ಆಗಿರುವ ಶುಲ್ಕ ಪರಿಷ್ಕರಣೆ 200 ಪಟ್ಟು ಹೆಚ್ಚಾಗಿದೆ. ಇದು ಟಿಂಬರ್ ಉದ್ದಿಮೆದಾರರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಆದ್ದರಿಂದ ಅಧಿಸೂಚನೆಗಳನ್ನು ರದ್ದುಪಡಿಸಬೇಕು. ಅರ್ಜಿದಾರ ಸಂಸ್ಥೆಯ ಸದಸ್ಯರಿಂದ ವಸೂಲಿ ಮಾಡಿರುವ ಶುಲ್ಕವನ್ನು ಮರು ಪಾವತಿಸಲು ನಿರ್ದೇಶಿಸಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.