ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಂಚನೆ ಪ್ರಕರಣ: ಮಂತ್ರಿ ಡೆವಲಪರ್ಸ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

Last Updated 16 ಸೆಪ್ಟೆಂಬರ್ 2022, 5:02 IST
ಅಕ್ಷರ ಗಾತ್ರ

ಬೆಂಗಳೂರು: ಕಡಿಮೆ ಬೆಲೆಗೆ ಫ್ಲ್ಯಾಟ್‌ವಿತರಿಸುವುದಾಗಿ ತಿಳಿಸಿ ಸಾರ್ವಜನಿಕರಿಂದ ಹಣ ಪಡೆದು ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆಮಂತ್ರಿ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ನಿರ್ದೇಶಕ ಸುಶೀಲ್ ಪಾಂಡುರಂಗ ಮಂತ್ರಿ ಮತ್ತು ಅವರ ಪುತ್ರ ಪ್ರತೀಕ್ ಮಂತ್ರಿ ವಿರುದ್ಧ ಅಪರಾಧ ತನಿಖಾ ದಳ (ಸಿಐಡಿ) ಕೈಗೊಂಡಿರುವ ಎಲ್ಲಾ ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿದೆ.

ಈ ಸಂಬಂಧ ಸುಶೀಲ್‌ ಪಾಂಡು ರಂಗ ಮಂತ್ರಿ ಮತ್ತು ಪ್ರತೀಕ್ ಮಂತ್ರಿ ಸಲ್ಲಿಸಿರುವ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

ಇದೇ ಮಾದರಿಯ ಆರೋಪಗಳಿಗೆ ಸಂಬಂಧಿಸಿದ ಇತರ 14 ಪ್ರಕರಣ ಗಳಲ್ಲಿ, ಮಂತ್ರಿ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಕಂಪ ನಿಯ ನಿರ್ದೇಶಕರಾದ ಸುಶೀಲ್ ಪಾಂಡು ರಂಗ ಮಂತ್ರಿ ಮತ್ತು ಮಾಜಿ ನಿರ್ದೇಶಕ ಪ್ರತೀಕ್ ಮಂತ್ರಿ ವಿರುದ್ಧದಕಾನೂನು ಪ್ರಕ್ರಿಯೆಗಳಿಗೆ ಈಗಾಗಲೇ ಹೈಕೋರ್ಟ್ ತಡೆ ನೀಡಿರುವುದನ್ನು ಪರಿಗಣಿಸಿ ನ್ಯಾಯಪೀಠ ಈ ತಡೆ ಆದೇಶ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT