ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು ಟರ್ಫ್ ಕ್ಲಬ್‌: ಕುದುರೆ ರೇಸ್‌ಗೆ ಹೈಕೋರ್ಟ್ ತಡೆ

Published 22 ಜೂನ್ 2024, 6:31 IST
Last Updated 22 ಜೂನ್ 2024, 6:31 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ (ರೇಸ್ ಕೋರ್ಸ್–ಬಿಟಿಸಿ) ಕುದುರೆ ಪಂದ್ಯಾವಳಿ ಆಯೋಜಿಸಲು ಅನುಮತಿ ನೀಡಿದ್ದ ಏಕಸದಸ್ಯ ನ್ಯಾಯಪೀಠದ ಮಧ್ಯಂತರ ಆದೇಶಕ್ಕೆ ವಿಭಾಗೀಯ ನ್ಯಾಯಪೀಠ ತಡೆ ವಿಧಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿ ನಿನ್ನೆಯಷ್ಟೇ (ಜೂನ್ 21) ಕಾಯ್ದಿರಿಸಿದ್ದ ತೀರ್ಪನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಶನಿವಾರ (ಜೂನ್ 22) ಬೆಳಗ್ಗೆ ಪ್ರಕಟಿಸಿತು.

ಇಂದೇ ಮಧ್ಯಾಹ್ನ 1.30 ರಿಂದ ಆರಂಭವಾಗಬೇಕಿದ್ದ ರೇಸ್ ಪಂದ್ಯಾವಳಿಗಳು ಇದರಿಂದಾಗಿ ತಾತ್ಕಾಲಿಕವಾಗಿ ಅಮಾನತುಗೊಂಡಂತಾಗಿದೆ.

ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ ವಾದ ಮಂಡಿಸಿದ್ದರು. ಸರ್ಕಾರಿ ವಕೀಲೆ ಕೆ.ಅನುಕಾಂಕ್ಷ ಕಲಕೇರಿ ವಾದಾಂಶ ಟಿಪ್ಟಣಿ ಮಾಡಲು ಸಹಕರಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT