ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ ವ್ಯಾಪ್ತಿಯ ರಸ್ತೆ ಗುಂಡಿಗಳನ್ನು ತಕ್ಷಣವೇ ದುರಸ್ತಿಗೊಳಿಸಿ: ಹೈಕೋರ್ಟ್‌

Last Updated 5 ಜನವರಿ 2022, 15:40 IST
ಅಕ್ಷರ ಗಾತ್ರ

ಬೆಂಗಳೂರು: ‘ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿನರಸ್ತೆ ಗುಂಡಿಗಳನ್ನು ತಕ್ಷಣವೇ ದುರಸ್ತಿಗೊಳಿಸಿ ಮುಚ್ಚುವ ನಿಟ್ಟಿನಲ್ಲಿ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಬೇಕು’ ಎಂದು ಹೈಕೋರ್ಟ್ ಆದೇಶಿಸಿದೆ.

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿನ ರಸ್ತೆ ದುಃಸ್ಥಿತಿ ಕುರಿತಂತೆ ಸ್ಥಳೀಯ ನಿವಾಸಿ ಎಲ್. ಅಶ್ವತ್ಥ ನಾರಾಯಣ ಚೌಧರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ, ‘ಬೆಂಗಳೂರಿನ ರಸ್ತೆಗಳು ಅತ್ಯಂತ ಕೆಟ್ಟ ಸ್ಥಿತಿಗೆ ತಲುಪಿದ್ದು, ಶೋಚನೀಯ ಸ್ಥಿತಿಯಲ್ಲಿವೆ’ ಎಂದು ಕಳವಳ ವ್ಯಕ್ತಪಡಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಜಿ.ಆರ್. ಮೋಹನ್, ‘ದಾಸರಹಳ್ಳಿ ವಲಯ ವ್ಯಾಪ್ತಿಯ ರಸ್ತೆ ಅಭಿವೃದ್ಧಿಗಾಗಿ ಕನಿಷ್ಠ ₹ 105 ಕೋಟಿ ಮೊತ್ತವನ್ನು ಬಿಡುಗಡೆ ಮಾಡಲು ಈ ಹಿಂದಿನ ವಿಚಾರಣೆ ವೇಳೆ ಸರ್ಕಾರಕ್ಕೆ ಸೂಚಿಸಲಾಗಿತ್ತು’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದಪಾಲಿಕೆ ಪರ ವಕೀಲ ವಿ.ಶ್ರೀನಿ, ‘ಬಿಬಿಎಂಪಿ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಗ್ರಾಮಗಳ 158 ಕಿ.ಮೀ ರಸ್ತೆ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಾದ್ಯಂತ ಕಾಂಕ್ರೀಟ್ ರಸ್ತೆಗಳ ನಿರ್ಮಾಣ ಕಾರ್ಯವೂ ಪ್ರಗತಿಯಲ್ಲಿದೆ. ಅಂತೆಯೇ, ರಸ್ತೆ ಗುಂಡಿ ಮುಚ್ಚುವ ಕಾರ್ಯವನ್ನೂ ಸಮರೋಪಾದಿಯಲ್ಲಿ ಕೈಗೆತ್ತಿಕೊಳ್ಳಲಾಗಿದೆ’ ಎಂದು ಸ್ಪಷ್ಟನೆ ನೀಡಿದರು.

‘ಅರ್ಜಿದಾರರು ಪ್ರಸ್ತಾಪಿಸಿರುವ ದಾಸರಹಳ್ಳಿ ವಲಯದಲ್ಲಿ 18 ಕಿಲೋಮೀಟರ್ ರಸ್ತೆ ಅಭಿವೃದ್ಧಿ ಕಾರ್ಯ ಈಗಾಗಲೇ ಪ್ರಗತಿಯಲ್ಲಿದೆ. ಈ ಕುರಿತಂತೆ ಒಂದು ದಿನದಲ್ಲಿ ವಸ್ತುಸ್ಥಿತಿ ವರದಿ ಸಲ್ಲಿಸಲಾಗುವುದು’ ಎಂದರು. ಈ ಸ್ಪಷ್ಟನೆಗೆ ನ್ಯಾಯಪೀಠ, ‘ಬಿಬಿಎಂಪಿ ವರದಿ ಸಲ್ಲಿಸಲಿ. ಅನಂತರ ನೋಡೋಣ’ ಎಂದು ಹೇಳಿ ವಿಚಾರಣೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT