ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆಗುಂಡಿ ಮುಚ್ಚಲು ಎಆರ್‌ಟಿಎಸ್‌ಗೆ ಕಾರ್ಯಾದೇಶ

Last Updated 21 ಏಪ್ರಿಲ್ 2022, 21:04 IST
ಅಕ್ಷರ ಗಾತ್ರ

ಬೆಂಗಳೂರು:‘ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಕೈಗೆತ್ತಿಕೊಳ್ಳಲು, ಅಮೆರಿಕನ್ ರೋಡ್ ಟೆಕ್ನಾಲಜೀಸ್ ಸಲ್ಯೂಷನ್ಸ್ (ಎಆರ್‌ಟಿಎಸ್) ಸಂಸ್ಥೆಗೆ ಇದೇ 20ರಂದು ತಾತ್ಕಾಲಿಕ ಕಾರ್ಯಾ ದೇಶ ನೀಡಲಾಗಿದೆ‘ ಎಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೈಕೋರ್ಟ್‌ಗೆ ತಿಳಿಸಿದೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿನ ರಸ್ತೆ ಗುಂಡಿ ಮುಚ್ಚುವುದಕ್ಕೆ ಸಂಬಂಧಿಸಿದಂತೆ ವಿಜಯನ್ ಮೆನನ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯ ಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಕಾರ್ಯಾದೇಶ ನೀಡಿರುವ ಬಗ್ಗೆ ಬಿಬಿಎಂಪಿ ವಕೀಲರು ನೀಡಿದ ಮಾಹಿತಿ ದಾಖಲಿಸಿಕೊಂಡ ನ್ಯಾಯಪೀಠ, ‘ಎಆರ್‌ಟಿಎಸ್ ಸಂಸ್ಥೆಯು ತಕ್ಷಣವೇ ನಗರದ ಪ್ರಮುಖ ರಸ್ತೆಗಳಲ್ಲಿನ ಗುಂಡಿ ಮುಚ್ಚುವ ಕೆಲಸ ಆರಂಭಿಸಬೇಕು’ ಎಂದು ನಿರ್ದೇಶಿಸಿತು.

ಪುನರ್ ಪರಿಗಣಿಸಿ: ‘ರಸ್ತೆ ಗುಂಡಿ ಮುಚ್ಚುವ ಪೈಥಾನ್ ಯಂತ್ರಕ್ಕೆ ಪ್ರತಿ ಗಂಟೆಗೆ ಎಷ್ಟು ಹಣ ಪಾವತಿಸಬೇಕು ಎಂಬುದನ್ನು ಬಿಬಿಎಂಪಿ ಮುಖ್ಯ ಆಯುಕ್ತರು ಪುನರ್ ಪರಿಗಣಿಸಬೇಕು’ ಎಂದು ನ್ಯಾಯಪೀಠ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಮೇ 31ಕ್ಕೆ ಮಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT