ಬೆಂಗಳೂರು: ಖಾಲಿ ಇರುವ ಹುದ್ದೆಗಳ ಪೈಕಿ ಮೊದಲ ಹಂತದಲ್ಲಿ 8,176 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಪ್ರಕ್ರಿಯೆಯನ್ನು ಗೃಹ ಇಲಾಖೆ ಆರಂಭಿಸಿದೆ.

ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ರಾಜ್ಯ ಸರ್ಕಾರವು ಅನುಮತಿ ನೀಡಿದೆ. ಈ ಬೆನ್ನಲ್ಲೇ ವಿವಿಧ ಘಟಕಗಳಿಗೆ ಹಂಚಿಕೆ ಆಗಿರುವ ಹುದ್ದೆಗಳ ಮಾಹಿತಿಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿ ನೇಮಕಾತಿ ವಿಭಾಗಕ್ಕೆ ರವಾನಿಸಿದೆ.

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕೂಡಲೇ ಅಧಿಸೂಚನೆ ಪ್ರಕಟಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ನೇತೃತ್ವದಲ್ಲಿ ಫೆ.24ರಂದು ಧಾರವಾಡದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದ್ದರು. ಇದಾದ ಬಳಿಕ ಒಟ್ಟು 56 ಸಾವಿರಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಿದೆ.

ಗೃಹ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ನಗರ, ಜಿಲ್ಲಾ ಹಾಗೂ ಘಟಕಗಳಿಗೆ ಮರು ಹಂಚಿಕೆ ಮಾಡಿ, ತಮ್ಮ ಘಟಕಗಳಿಗೆ ಹಂಚಿಕೆ ಆಗಿರುವ ಹುದ್ದೆಗಳಿಗೆ ಸಂಬಂಧಿಸಿದ ವರ್ಗೀಕರಣದ ವಿವರವನ್ನು ಪೊಲೀಸ್ ನೇಮಕಾತಿ ವಿಭಾಗಕ್ಕೆ ಒದಗಿಸುವಂತೆ ಈ ಹಿಂದೆ ನಿರ್ದೇಶನ ನೀಡಲಾಗಿತ್ತು. ವಿವಿಧ ಘಟಕಗಳಿಗೆ ಚಾಲ್ತಿ ಮೀಸಲಾತಿ/ರೋಸ್ಟರ್ ನಿಯಮಗಳ ಅನ್ವಯ ವರ್ಗೀಕರಣದ ವಿವರವನ್ನು ಪೊಲೀಸ್ ನೇಮಕಾತಿ ವಿಭಾಗಕ್ಕೆ ರವಾನೆ ಮಾಡಲಾಗಿದೆ.

ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿಯ ಪ್ರಮಾಣವನ್ನು ಕ್ರಮವಾಗಿ ಶೇ 15ರಿಂದ ಶೇ 17ಕ್ಕೆ ಹಾಗೂ ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಿದ್ದ ನಿರ್ಧಾರವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗಿತ್ತು. ನ್ಯಾಯಾಲಯವು ಅರ್ಜಿಗಳ ಸಂಬಂಧ 2025ರ ನವೆಂಬರ್ 27ರಂದು ನೀಡಿರುವ ಮಧ್ಯಂತರ ಆದೇಶವನ್ನು ಪರಿಗಣಿಸಿ, ಖಾಲಿಯಿರುವ ಸಿವಿಲ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲು ಹಾಗೂ ಆ ಹುದ್ದೆಗಳನ್ನು ಮುಂದುವರಿಸಲು ಸರ್ಕಾರವು ನಿರ್ದೇಶನ ನೀಡಿದೆ.

ಗೃಹ ಇಲಾಖೆಯಲ್ಲಿ ಶೇ 15ರಷ್ಟು ಹುದ್ದೆಗಳು ಖಾಲಿಯಿವೆ. ಭರ್ತಿಗೆ ಅಧಿಸೂಚನೆ ಹೊರಡಿಸಲಾಗುವುದು. ಕೆಲವೇ ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
– ಎಂ.ಎ.ಸಲೀಂ, ರಾಜ್ಯ ಪೊಲೀಸ್ ಮಹಾನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.