ಬೆಂಗಳೂರು: ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ, ಮಾದಿಗ ಸಂಘಟನೆಗಳ ಒಕ್ಕೂಟದಿಂದ ನಗರದ ಮೌರ್ಯ ವೃತ್ತದ (ಗಾಂಧಿ ಪ್ರತಿಮೆ) ಬಳಿ ಬುಧವಾರ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯ ಬಳಿಕ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಹೋರಾಟಗಾರರು ಮುಂದಾಗಿದ್ದರು. ಆದರೆ, ಅವರನ್ನು ಮೌರ್ಯ ವೃತ್ತದ ಬಳಿಯೇ ಪೊಲೀಸರು ತಡೆದರು. ಇದೇ ಬೇಡಿಕೆ ಇಟ್ಟುಕೊಂಡು ಮಾದಿಗ ಸಂಘಟನೆಗಳ ಒಕ್ಕೂಟದಿಂದ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಯಿತು.

ಒಳಮೀಸಲಾತಿ ಇಲ್ಲದೇ 56,432 ಹುದ್ದೆಗಳಿಗೆ ನೇಮಕಾತಿ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದು ಮಾದಿಗ ಹಾಗೂ ಮಾದಿಗ ಸಂಬಂಧಿತ ಉಪ ಜಾತಿಗಳಿಗೆ ಮರಣಶಾಸನವಾಗಿದೆ ಎಂದು ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು.

ಫೆ.27ರಂದು ಹೊರಡಿಸಿರುವ ಆದೇಶವನ್ನು ತಕ್ಷಣವೇ ವಾಪಸ್ ಪಡೆಯಬೇಕು. ಒಳಮೀಸಲಾತಿ ಅಳವಡಿಸಿ ಶೇ 15ರಷ್ಟು ಮೀಸಲಾತಿಯಡಿ ನೇಮಕಾತಿ ನಡೆಸಬೇಕು ಎಂದು ಆಗ್ರಹಿಸಿದರು.

ವಿಶ್ವವಿದ್ಯಾಲಯಗಳನ್ನು ಒಂದು ಘಟಕವಾಗಿಸಿ ನೇಮಕಾತಿ ಮಾಡುವ ಪ್ರಯತ್ನವನ್ನು ಕೈಬಿಡಬೇಕು. ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳಿಗೆ ಶೇ 1ರಷ್ಟು ಪ್ರತ್ಯೇಕ ಮೀಸಲಾತಿ ಕಲ್ಪಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಮೊದಲ ಅಧಿವೇಶನದಲ್ಲಿಯೇ ಒಳಮೀಸಲಾತಿ ಜಾರಿಗೆ ತರುವುದಾಗಿ ಭರವಸೆ ನೀಡಿ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಕಳೆದಿದ್ದರೂ ಪ್ರಾಮಾಣಿಕ ಪ್ರಯತ್ನ ನಡೆದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದೀಗ ಉದ್ಯೋಗ ನೇಮಕಾತಿಗಳಲ್ಲಿ ಒಳಮೀಸಲಾತಿ ಅಳವಡಿಸಲು ತಾಂತ್ರಿಕ ಅಡಚಣೆ ಅಥವಾ ಕಾನೂನು ತೊಡಕಿದೆ ಎಂದು ಕುಂಟುನೆಪ ಹೇಳುವುದು ಮೋಸ, ಕುತಂತ್ರ. ಒಳಮೀಸಲಾತಿಯ ವಿರೋಧಿಗಳು ಸಂವಿಧಾನದ ವಿರೋಧಿಗಳು ಎಂದು ಆಕ್ರೋಶ ಹೊರಹಾಕಿದರು.

ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿಯ ರಾಜ್ಯ ಅಧ್ಯಕ್ಷ ಎನ್.ಮೂರ್ತಿ, ಕರ್ನಾಟಕ ಮಾದಿಗ ದಂಡೋರ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಶಂಕರಪ್ಪ, ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಗೌರವಾಧ್ಯಕ್ಷ ಕೇಶವಮೂರ್ತಿ, ವಿಶ್ವ ಜಾಂಭವ ಮಹಾಸಭಾದ ರಾಜ್ಯ ಅಧ್ಯಕ್ಷ ಭೀಮ್ರಾಜ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.