ಮಂಗಳವಾರ, ಜೂನ್ 28, 2022
24 °C

ಕಟ್ಟಿ ಸೇರಿ ಮೂವರಿಗೆ ಪುಸ್ತಕ ಬಹುಮಾನ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಜಾನಪದ ಅಕಾಡೆಮಿಯು 2020ನೇ ಸಾಲಿನ ಪುಸ್ತಕ ಬಹುಮಾನ ಘೋಷಿಸಿದ್ದು, ಸಿಂದಗಿಯ ಚನ್ನಪ್ಪ ಕಟ್ಟಿ ಅವರ ‘ಅಮೋಘ ಸಿದ್ಧ ಜನಪದ ಮಹಾಕಾವ್ಯ’ ಸೇರಿದಂತೆ ಮೂವರು ಲೇಖಕರ ಕೃತಿಗಳು ಆಯ್ಕೆಯಾಗಿವೆ.

ತುಮಕೂರಿನ ಪಾವಗಡದ ಸುರೇಶ್ ನಾಗಲಮಡಿಕೆ ಅವರ ‘ಹಾಡು ಕಲಿಸಿದ ಹರ’ (ಜನಪದ ಮಹಾಕಾವ್ಯಗಳು: ಸಂಸ್ಕೃತಿ ಸಂಕಥನ) ಹಾಗೂ ಉಡುಪಿಯ ತಲ್ಲೂರು ಶಿವರಾಮ ಶೆಟ್ಟಿ ಅವರ ‘ಕಲಾ ಸಂಚಯ ದಕ್ಷಿಣ ಭಾರತದ ಕೆಲವು ಅನುಷ್ಠಾನ ಕಲೆಗಳು’ ಕೃತಿ ಪುಸ್ತಕ ಬಹುಮಾನಕ್ಕೆ ಭಾಜನವಾಗಿವೆ. 

ಈ ಬಹುಮಾನವು ತಲಾ ₹ 25 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಏಪ್ರಿಲ್ ತಿಂಗಳಲ್ಲಿ ವಿಜಯನಗರದ ಹೊಸಪೇಟೆಯಲ್ಲಿ ನಡೆಯುವ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿಯೇ ಪುಸ್ತಕ ಬಹುಮಾನ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು