ಬೆಂಗಳೂರು: ಕರ್ನಾಟಕ ಪತ್ರಕರ್ತರ ಸಹಕಾರ ಸಂಘವು ತನ್ನ ಸದಸ್ಯ ಹಾಗೂ ಸಹ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಿದೆ.
ಎಸ್‌ಎಸ್‌ಎಲ್‌ಸಿಯಲ್ಲಿ ಶೇ 85ಕ್ಕಿಂತ ಹೆಚ್ಚು, ಪಿಯುಸಿ ಹಾಗೂ ಪದವಿ/ ಸ್ನಾತಕೋತ್ತರ ಪದವಿಯಲ್ಲಿ ಶೇ 80ಕ್ಕಿಂತ ಹೆಚ್ಚು ಅಂಕ ಗಳಿಸಿದ ಮಕ್ಕಳು ಪ್ರತಿಭಾ ಪುರಸ್ಕಾರಕ್ಕೆ ಅರ್ಹರಾಗಿರುತ್ತಾರೆ. ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ್ದಲ್ಲಿ ದಾಖಲೆ ಸಹಿತ ಸಂಘಕ್ಕೆ ಸಲ್ಲಿಸಿದಲ್ಲಿ ಆಡಳಿತ ಮಂಡಳಿ ಪರಿಶೀಲಿಸಿ, ಆಯ್ಕೆಯಾದವರನ್ನು ಅಭಿನಂದಿಸುತ್ತದೆ ಎಂದು ಸಂಘದ ಅಧ್ಯಕ್ಷ ರಮೇಶ್ ಎಂ. ಪಾಳ್ಯ ತಿಳಿಸಿದ್ದಾರೆ.
ಸೆಪ್ಟೆಂಬರ್ 5ರೊಳಗೆ ಅರ್ಜಿಯನ್ನು ದಾಖಲೆಗಳೊಂದಿಗೆ ಸಂಘದ ಕಚೇರಿಗೆ ತಲುಪಿಸಬೇಕು. ಸೆ.22ರಂದು ನಡೆಯುವ ಸರ್ವ ಸದಸ್ಯರ ಸಭೆಯಲ್ಲಿ ಪ್ರತಿಭಾ ಪುರಸ್ಕಾರ ವಿತರಿಸಲಾಗುವುದು ಎಂದಿದ್ಧಾರೆ.