ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್, ಉಪಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಹಾಗೂ ಬಿ. ವೀರಪ್ಪ ಅವರು ಸೋಂಪುರ, ಕಗ್ಗದಾಸಪುರ ಕೆರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಲ್ಲಿನ ಸ್ಥಿತಿ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಬಿ.ಎಸ್.ಪಾಟೀಲ್ ಅವರು, ಬನಶಂಕರಿ 6ನೇ ಹಂತದಲ್ಲಿರುವ ಸೋಂಪುರ ಕೆರೆ ಹಾಗೂ ಕೆರೆಯ ಪಕ್ಕದಲ್ಲಿರುವ ಅಂಗಧೀರನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೆರೆಗೆ ಯಾವುದೇ ನೀರು ಹರಿಯದಂತೆ ಕ್ರಮವಹಿಸಬೇಕು ಹಾಗೂ ಈ ಬಗ್ಗೆ ಕಾಲಕಾಲಕ್ಕೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಿದ್ದು, ಕಾರ್ಯಾದೇಶದ ಪ್ರಕಾರ ಅಭಿವೃದ್ಧಿ ಕಾರ್ಯ ಕೈಗೊಂಡು ವರದಿ ಸಲ್ಲಿಸುವಂತೆ ತಿಳಿಸಿದರು.

ಕೆರೆಯ ಒಳ ಭಾಗಕ್ಕೆ ಬೇಲಿ ಹಾಕುವಂತೆ ಸಂಬಂಧಪಟ್ಟ ಜಿ.ಬಿ.ಎ. ಅಧಿಕಾರಿಗಳಿಗೆ ನಿರ್ದೇಶಿಸುವಂತೆ ಸ್ಥಳದಲ್ಲಿ ಹಾಜರಿದ್ದ ದೂರುದಾರರು ಕೋರಿದರು. ಸ್ಥಳದಲ್ಲಿದ್ದ ಮುಖ್ಯ ಎಂಜಿನಿಯರ್ಗೆ ಈ ಬಗ್ಗೆ ಕ್ರಮಕೈಗೊಂಡು ವರದಿ ಸಲ್ಲಿಸುವಂತೆ ಲೋಕಾಯುಕ್ತರು ಸೂಚಿಸಿದರು.

ಬನಶಂಕರಿ 6ನೇ ಹಂತದಲ್ಲಿರುವ ಅಂಗಧೀರನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಘಟಕದಲ್ಲಿ ದುರ್ವಾಸನೆ, ನೊಣಗಳ ಕಾಟ, ಲಿಚಿಟ್ ಸಮಸ್ಯೆಯನ್ನು ಕಂಡು ಲೋಕಾಯುಕ್ತರು, ಜಲಮಂಡಳಿ ಹಾಗೂ ಜಿ.ಬಿ.ಎ. ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಈ ಎಲ್ಲಾ ಸಮಸ್ಯೆಯನ್ನು ಪರಿಹರಿಸಿ, ವರದಿ ಸಲ್ಲಿಸುವಂತೆ ತಿಳಿಸಿದರು.

ರಸ್ತೆ ಬದಿಗಳಲ್ಲಿ ಕಸ ಹಾಕಿರುವುದನ್ನು ಗಮನಿಸಿದ ಲೋಕಾಯುಕ್ತರು ಕಸವನ್ನು ತೆರವುಗೊಳಿಸಿ, ಈ ಬಗ್ಗೆ ತೆಗೆದುಕೊಂಡ ಕ್ರಮದ ಬಗ್ಗೆ ವರದಿಯನ್ನು ಮೂರು ದಿನದೊಳಗೆ ಸಲ್ಲಿಸುವಂತೆ ಜಿ.ಬಿ.ಎ ಅಧಿಕಾರಿಗಳಿಗೆ ಸೂಚಿಸಿದರು.

ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಸಿ.ವಿ.ರಾಮನಗರದ ಕಗ್ಗದಾಸಪುರ ಕೆರೆಗೆ ಭೇಟಿ ನೀಡಿದರು. ಕೆರೆ ಸುತ್ತಲೂ ಬಫರ್ ವಲಯ ಬಿಟ್ಟಿರಲಿಲ್ಲ. ಕೆರೆಯ ಆವರಣದಲ್ಲಿ ನಿರ್ಮಿಸುತ್ತಿರುವ ಎಸ್.ಟಿ.ಪಿ. ಸಹ ಬಫರ್ ವಲಯದಲ್ಲಿದೆ. ಕೆರೆಯಲ್ಲಿ ಹೂಳು ತೆಗೆಯಲು ₹3 ಕೋಟಿ ವ್ಯಯಿಸಿದ್ದರೂ ಗಿಡಗಂಟಿಗಳು, ಪ್ಲಾಸ್ಟಿಕ್ ವಸ್ತುಗಳು ಇರುವುದು ಕಂಡು ಬಂತು. ಕೆರೆಯ ಆವರಣದಲ್ಲಿ ನಾಯಿಗಳ ಹಾವಳಿ ಹೆಚ್ಚಿದ್ದು, ವಾಯು ವಿಹಾರ ಮಾಡಲು ಬರುವ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ಈ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮಲ್ಲೇಶ್ ಪಾಳ್ಯ, ಬಿಇಎಂಎಲ್, ಎಚ್ಎಎಲ್ ಆವರಣದ ಗೋಡೆಗಳ ಎರಡೂ ಬದಿ ಹಾಗೂ ಸಾವಿತ್ರಿ ಬಾಪುಲೆ ಕೌಸಲ್ಯ ಭವನದ ಎದುರು ರಸ್ತೆಯ ಎರಡೂ ಬದಿಗಳಲ್ಲಿ ಕಸ ವಿಲೇವಾರಿ ಮಾಡುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಿದರು.

ಆಸ್ಟಿನ್ ಟೌನ್ನಲ್ಲಿರುವ ಕೆಎಸ್ಆರ್ಟಿಸಿ, ಪೊಲೀಸ್ ವಸತಿ ಗೃಹ ಬಳಿ ಇರುವ ರಾಜಕಾಲುವೆಯಲ್ಲಿ ನೀರು ಸರಾಗವಾಗಿ ಹರಿಯಲು ಕಸ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.