ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಾಟಕ ಅಕಾಡೆಮಿ: ಸೆ. 19ರಂದು ವಾರ್ಷಿಕ ಪ್ರಶಸ್ತಿ ಪ್ರದಾನ

Published : 17 ಸೆಪ್ಟೆಂಬರ್ 2024, 15:32 IST
Last Updated : 17 ಸೆಪ್ಟೆಂಬರ್ 2024, 15:32 IST
ಫಾಲೋ ಮಾಡಿ
Comments

ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿಯು ಮೂರು ವರ್ಷಗಳ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇದೇ 19ರಂದು ಸಂಜೆ 4 ಗಂಟೆಗೆ ರವಿಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಂಗ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡುತ್ತಾರೆ. ಪ್ರಶಸ್ತಿ ಸಂಚಿಕೆಯನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅನಾವರಣ ಮಾಡುತ್ತಾರೆ. ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿ, ಸಂಸದ ಪಿ.ಸಿ. ಮೋಹನ್ ಭಾಗವಹಿಸುತ್ತಾರೆ. ಕೇರಳದ ರಂಗಕರ್ಮಿ ಚಂದ್ರದಾಸನ್ ಮತ್ತು ಮರಾಠಿ ಚಲನಚಿತ್ರ ಹಾಗೂ ರಂಗಭೂಮಿ ನಟ ಗಣೇಶ್ ಯಾದವ್ ಉಪಸ್ಥಿತರಿರುತ್ತಾರೆ. ಶಾಸಕ ಉದಯ್ ಬಿ. ಗರುಡಾಚಾರ್ ಸಮಾರಂಭದ ಅಧ್ಯಕ್ಷತೆ ವಹಿಸುತ್ತಾರೆ ಎಂದು ಅಕಾಡೆಮಿ ಅಧ್ಯಕ್ಷ ಕೆ.ವಿ. ನಾಗರಾಜಮೂರ್ತಿ ತಿಳಿಸಿದ್ದಾರೆ.

ನಟಿ ಉಮಾಶ್ರೀ, ನಾಟಕಕಾರರಾದ ಎಚ್.ಎಸ್. ಶಿವಪ್ರಕಾಶ್ ಹಾಗೂ ರಂಗಕರ್ಮಿ ಕೋಟಿಗಾನಹಳ್ಳಿ ರಾಮಯ್ಯ ಅವರಿಗೆ ‘ಜೀವಮಾನ ಸಾಧನೆ ಪ್ರಶಸ್ತಿ’ (ಗೌರವ ಪ್ರಶಸ್ತಿ) ಸೇರಿ 92 ಮಂದಿಗೆ ಅಕಾಡೆಮಿ ಪ್ರಶಸ್ತಿ ವಿತರಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT