ಬೆಂಗಳೂರು: ‘ರಾಜ್ಯದ ಮಲೆನಾಡು ಜಿಲ್ಲೆಗಳ ಕಾಫಿ ಎಸ್ಟೇಟ್ಗಳಲ್ಲಿ ಅಕ್ರಮ ವಲಸಿಗರು ಕೆಲಸ ಮಾಡುತ್ತಿದ್ದಾರೆ ಎನ್ನುವ ಮಾಹಿತಿಯಿದೆ. ಅಕ್ರಮ ವಲಸಿಗರನ್ನು ಪತ್ತೆಹಚ್ಚಿ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಯಾ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಹೇಳಿದರು.

ಬೆಂಗಳೂರು ಪ್ರೆಸ್ ಕ್ಲಬ್ ಬುಧವಾರ ಇಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ‘ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಪರಿಶೀಲನಾ ಕಾರ್ಯಗಳು ನಡೆಯುತ್ತಿವೆ’ ಎಂದು ಹೇಳಿದರು.

‘ದಾಖಲೆಗಳನ್ನು ಪರಿಶೀಲಿಸಿ ಬೆಂಗಳೂರಿನಲ್ಲಿ ಮನೆಗಳನ್ನು ಬಾಡಿಗೆಗೆ ನೀಡಬೇಕು. ಮನೆಯ ಮಾಲೀಕರು ಎಚ್ಚರಿಕೆ ವಹಿಸಬೇಕು’ ಎಂದು ಹೇಳಿದರು.

ಎಎನ್ಟಿಎಫ್ಗೆ ಸಿಬ್ಬಂದಿಯ ಬಲ: ಮಾದಕ ವಸ್ತು (ಡ್ರಗ್ಸ್) ಪೂರೈಕೆ, ಮಾರಾಟ ದಂಧೆಗೆ ಸಂಪೂರ್ಣ ಕಡಿವಾಣ ಹಾಕಲು ರಾಷ್ಟ್ರೀಯ ಮಾದಕವಸ್ತು ನಿಯಂತ್ರಣ ಘಟಕದ (ಎನ್ಸಿಬಿ) ಮಾದರಿಯಲ್ಲಿಯೇ ರಾಜ್ಯದಲ್ಲೂ ‘ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ’ (ಎಎನ್ಟಿಎಫ್) ಅಸ್ತಿತ್ವಕ್ಕೆ ತರಲಾಗಿದೆ. ಆ ಪಡೆಗೆ 66 ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.

‘ಡ್ರಗ್ಸ್ ವಿರುದ್ಧ ಸಮರದ ರೀತಿಯಲ್ಲೇ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದುವರೆಗೂ ಪೂರೈಕೆದಾರರು, ಪೆಡ್ಲರ್ಗಳನ್ನು ಮಾತ್ರ ಪತ್ತೆ ಮಾಡಿ ಕ್ರಮ ತೆಗೆದುಕೊಳ್ಳಲಾಗುತ್ತಿತ್ತು. ಎಎನ್ಟಿಎಫ್ ಸ್ಥಾಪನೆಯಾದ ಮೇಲೆ ಡ್ರಗ್ಸ್ ತಯಾರಕರನ್ನೂ ಪತ್ತೆ ಹಚ್ಚುತ್ತಿದ್ದೇವೆ. 2024ರಲ್ಲಿ 6,800, 2025ರಲ್ಲಿ ನಾಲ್ಕು ಸಾವಿರ ಡ್ರಗ್ಸ್ ಪ್ರಕರಣಗಳು ದಾಖಲಾಗಿದ್ದವು. ಈ ವರ್ಷ ಎರಡೇ ತಿಂಗಳಲ್ಲಿ 2,378 ಪ್ರಕರಣ ದಾಖಲು ಮಾಡಲಾಗಿದೆ. ಇದೇ ರೀತಿ ಕಾರ್ಯಾಚರಣೆ ನಡೆದರೆ, ಈ ವರ್ಷ 15 ಸಾವಿರಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗುವ ಸಾಧ್ಯತೆಯಿದೆ. ಪೆಡ್ಲರ್, ಪೂರೈಕೆದಾರರ, ಉತ್ಪಾದಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ದಂಧೆಕೋರರನ್ನು ಮಟ್ಟ ಹಾಕಲಾಗುವುದು’ ಎಂದು ಹೇಳಿದರು.

‘ಇಲಾಖೆಯಲ್ಲಿ ತಂತ್ರಜ್ಞಾನದ ಬಳಕೆ ಹೆಚ್ಚಿಸಲಾಗಿದೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭದಲ್ಲಿ ವಾಹನ ತಡೆದು ದಂಡ ಹಾಕಲಾಗುತ್ತಿತ್ತು. ಆದರೆ, ಈಗ ತಂತ್ರಜ್ಞಾನವನ್ನು ಬಳಸಿಕೊಂಡು ಪ್ರತಿನಿತ್ಯ 40 ಸಾವಿರ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ಪತ್ತೆ ಹಚ್ಚಲಾಗುತ್ತಿದೆ. ತಂತ್ರಜ್ಞಾನ ಇಲ್ಲದಿದ್ದರೆ ಆ ಕೆಲಸಗಳಿಗೆ ಸಿಬ್ಬಂದಿಯನ್ನೇ ಬಳಕೆ ಮಾಡಿಕೊಳ್ಳಬೇಕಿತ್ತು’ ಎಂದರು.

‘ಪ್ರಕರಣಗಳ ತನಿಖೆ, ಆರೋಪಿಗಳ ಪತ್ತೆಕಾರ್ಯದಲ್ಲೂ ತಂತ್ರಜ್ಞಾನ ಪ್ರಧಾನ ಪಾತ್ರ ವಹಿಸುತ್ತಿದೆ. ಸಿಸಿಟಿವಿ ಕ್ಯಾಮೆರಾ ಬಂದ ಮೇಲೆ ಪೊಲೀಸರ ಕೆಲಸ ಮತ್ತಷ್ಟು ಸರಳ ಆಗಿದೆ. ಜತೆಗೆ, ತಂತ್ರಜ್ಞಾನ ಬೆಳೆದಂತೆ ಸೈಬರ್ ಅಪರಾಧ ಪ್ರಕರಣಗಳೂ ಹೆಚ್ಚಾಗಿವೆ. 46 ಮಾದರಿಯ ಸೈಬರ್ ಅಪರಾಧ ಪ್ರಕರಣಗಳಿವೆ. ಆರೋಪಿಗಳ ಪತ್ತೆಗೆ ಪೊಲೀಸರಿಗೂ ನಿರಂತರವಾಗಿ ತರಬೇತಿ ನೀಡಲಾಗುತ್ತಿದೆ’ ಎಂದು ಪ್ರಶ್ನೆಯೊಂದಕ್ಕೆ ಸಲೀಂ ಉತ್ತರಿಸಿದರು.

ಬೆಂಗಳೂರಿನಲ್ಲಿ ವಾಹನ ದಟ್ಟಣೆ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ. ಗೊರಗುಂಟೆಪಾಳ್ಯದಲ್ಲಿ ವಾಹನ ದಟ್ಟಣೆ ನಿಯಂತ್ರಣಕ್ಕೆ ಹೊಸ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದರು.

ಪ್ರೆಸ್ ಕ್ಲಬ್ ಅಧ್ಯಕ್ಷ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ ಉಪಸ್ಥಿತರಿದ್ದರು.

ತಪ್ಪಿತಸ್ಥ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ

‘ಭ್ರಷ್ಟಾಚಾರ ಕರ್ತವ್ಯಲೋಪ ಎಸಗಿದ ಪೊಲೀಸ್ ಸಿಬ್ಬಂದಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತಿದೆ’ ಎಂದು ಎಂ.ಎ.ಸಲೀಂ ಹೇಳಿದರು. ‘ಸಿವಿಲ್ ಪ್ರಕರಣಗಳಲ್ಲಿ ಪೊಲೀಸರು ಮಧ್ಯ ಪ್ರವೇಶಿಸುವಂತಿಲ್ಲ. ಇಂತಹ ಪ್ರಕರಣಗಳಲ್ಲಿ ನ್ಯಾಯ ಕೇಳಿಕೊಂಡು ಠಾಣೆಗೆ ಬಂದವರಿಗೆ ಮಾರ್ಗದರ್ಶನ ನೀಡಬಹುದು. ಆಗ ಸಾರ್ವಜನಿಕರಲ್ಲಿ ಪೊಲೀಸರ ಮೇಲೆ ನಂಬಿಕೆ ವಿಶ್ವಾಸ ಬರಲಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.