ಬೆಂಗಳೂರು: ‘ಪೊಲೀಸ್ ಸಿಬ್ಬಂದಿಯ ವೈದ್ಯಕೀಯ ತಪಾಸಣಾ ಭತ್ಯೆಯನ್ನು ₹1 ಸಾವಿರದಿಂದ ₹1,500ಕ್ಕೆ ಏರಿಕೆ ಮಾಡಲಾಗಿದೆ. ಅಗತ್ಯ ಬಿದ್ದರೆ ಇನ್ನೂ ಏರಿಕೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ರಾಜ್ಯ ಪೊಲೀಸ್ ಮತ್ತು ಬಿಎಂಆರ್ಸಿಎಲ್ ಸಹಯೋಗದಲ್ಲಿ ಬೆಂಗಳೂರಿನ ಕೋರಮಂಗಲದ ಸಿಲ್ಕ್ ಬೋರ್ಡ್ ಜಂಕ್ಷನ್ ಬಳಿ ನಿರ್ಮಿಸಿರುವ ಕೆಎಸ್ಆರ್ಪಿ ಸಮುದಾಯ ಭವನದ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

‘ಪೊಲೀಸ್ ಸಿಬ್ಬಂದಿ ಬಲಪಡಿಸಲು ಸರ್ಕಾರ ಸಿದ್ಧವಿದೆ. ಅಪರಾಧ ಪ್ರಕರಣಗಳನ್ನು ಕಡಿಮೆಗೊಳಿಸುವತ್ತ ಪೊಲೀಸರು ಗಮನ ನೀಡಬೇಕು. ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು. ಯಾರೇ ತಪ್ಪು ಮಾಡಿದರೂ ಸರ್ಕಾರವನ್ನೇ ದೋಷಿಸಲಾಗುತ್ತದೆ. ಅಹಿತಕರ ಘಟನೆಗಳು ನಡೆದರೆ ಸರ್ಕಾರವೇ ಜವಾಬ್ದಾರಿ. ಅಂತಹ ಪರಿಸ್ಥಿತಿ ಬರದಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.

‘ಕರಾವಳಿಯಲ್ಲಿ ಆಗಾಗ ಕೋಮುಗಲಭೆಗಳು ನಡೆಯುತ್ತಲೇ ಇರುವುದರಿಂದ ವಿಶೇಷ ಕಾರ್ಯಪಡೆ ರಚಿಸಲಾಗಿದೆ. ಕೋಮುಗಲಭೆಗಳು ಪ್ರಾರಂಭವಾದರೆ ನಿರಂತರವಾಗಿ ನಡೆಯುತ್ತವೆ. ಅವುಗಳನ್ನು ಪ್ರಾರಂಭಿಕ ಹಂತದಲ್ಲಿಯೇ ಹತ್ತಿಕ್ಕಬೇಕು’ ಎಂದು ನಿರ್ದೇಶಿಸಿದರು.

‘ಹಿರಿಯ ಪೊಲೀಸ್ ಅಧಿಕಾರಿಗಳು ನಿರಂತರವಾಗಿ ಪೊಲೀಸ್ ಠಾಣೆಗೆ ಭೇಟಿ ನೀಡಬೇಕು. ರಾಜ್ಯದಲ್ಲಿ 2023ಕ್ಕೆ ಹೋಲಿಸಿದರೆ, 2024ರಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿವೆ. ರಾಜ್ಯದ ಅಭಿವೃದ್ಧಿಯು ಪೊಲೀಸರ ಕಾರ್ಯಕ್ಷಮತೆಯ ಮೇಲೆ ಅವಲಂಬಿತವಾಗಿರುತ್ತದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಗೂ ಅಭಿವೃದ್ಧಿಗೆ ನೇರ ಸಂಬಂಧವಿದೆ. ಈ ದಿಸೆಯಲ್ಲಿ ಪೊಲೀಸರು ಶ್ರಮಿಸುತ್ತಿರುವುದು ಶ್ಲಾಘನೀಯ’ ಎಂದರು.

‘ಪೊಲೀಸ್ ಕಾನ್ಸ್ಟೆಬಲ್ ಹಾಗೂ ಸಹಾಯಕ ಪೊಲೀಸ್ ನಿರೀಕ್ಷಕರಿಗೆ ಕಡಿಮೆ ದರದಲ್ಲಿ ಸಮುದಾಯ ಭವನವನ್ನು ಒದಗಿಸಬೇಕು. ಪೊಲೀಸ್ ಸಮುದಾಯ ಭವನ ಸುಸಜ್ಜಿತವಾಗಿದ್ದು, ನಿರ್ವಹಣೆಗೆ ಅಗತ್ಯವಿರುವಷ್ಟು ಆದಾಯ ಬರುವಂತೆ ನೋಡಿಕೊಳ್ಳಬೇಕು’ ಎಂದರು.

ಗೃಹ ಸಚಿವ ಜಿ.ಪರಮೇಶ್ವರ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಂ ಉಪಸ್ಥಿತರಿದ್ದರು.

ವಸತಿಗೃಹ ಉದ್ಘಾಟನೆ

ಗಾಂಧಿನಗರದ ಬೆಂಗಳೂರು ಕೇಂದ್ರ ಕಾರಾಗೃಹದ ಆವರಣದಲ್ಲಿ ಪೊಲೀಸ್ ಗೃಹ–2025ರ ಯೋಜನೆ ಅಡಿ ನಿರ್ಮಿಸಲಾಗಿರುವ ವಸತಿಗೃಹಗಳ ಸಮುಚ್ಚಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಸಮುಚ್ಚಯದಲ್ಲಿ 128 ವಸತಿಗೃಹಗಳು ಇದ್ದು ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ₹40 ಕೋಟಿ ಅನುದಾನದಲ್ಲಿ ನಿರ್ಮಿಸಲಾಗಿದೆ. ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವಾ ಅಕಾಡೆಮಿಯ ಆವರಣದಲ್ಲಿ ವಿವಿಧ ಕಟ್ಟಡಗಳ ನಿರ್ಮಾಣಕ್ಕೆ ಮುಖ್ಯಮಂತ್ರಿ ಶಂಕುಸ್ಥಾಪನೆ ನೆರವೇರಿಸಿದರು. ಗೃಹ ಸಚಿವ ಜಿ.ಪರಮೇಶ್ವರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಕಾನ್ಸ್ಟೇಬಲ್ಗಳಿಗೆ ‘ಪಿ–ಕ್ಯಾಪ್’

ಪೊಲೀಸ್ ಕಾನ್ಸ್ಟೇಬಲ್ಗಳು ಸದ್ಯ ಧರಿಸುತ್ತಿರುವ ಟೋಪಿಗಳ ಬದಲಿಗೆ ‘ಪಿ–ಕ್ಯಾಪ್’ ಒದಗಿಸಲು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಡಿಯೊ ಬಿಡುಗಡೆ

ಅಪರಾಧ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಅರುಣ್ ಎಂಬಾತನ ಪ್ರತಿಭೆ ಗುರುತಿಸಿ ಆತನಿಂದ ಜೈಲಾಧಿಕಾರಿಗಳು ತತ್ವಪದ ಹಾಡಿಸಿದ್ದಾರೆ. ಸಂಗೀತ ನಿರ್ದೇಶಕ ಕೆ.ಕಲ್ಯಾಣ್ ಅವರ ಸಾಹಿತ್ಯದಲ್ಲಿ ಮೂಡಿ ಬಂದ ಉತ್ತಮರ ಸಂಗ... ಎಂಬ ಹಾಡನ್ನು ಕೈದಿ ಅರುಣ್ ಆಚಾರ್ ಹಾಡಿದ್ದಾನೆ. ಕೇಂದ್ರ ಕಾರಾಗೃಹದ ಆವರಣದಲ್ಲಿ ನಿರ್ಮಿಸಿರುವ ವಸತಿಗೃಹಗಳ ಉದ್ಘಾಟನೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಡಿನ ಮೇಕಿಂಗ್ ವಿಡಿಯೊವನ್ನು ಬಿಡುಗಡೆ ಮಾಡಿದರು. ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಜೈಲು ಸೇರಿರುವ ಕೈದಿಗಳಿಗೆ ಮನಪರಿವರ್ತಿಸುವ ಹಾಗೂ ಉತ್ತಮ ಸಮಾಜದೆಡೆಗೆ ಸ್ಫೂರ್ತಿ ನೀಡುವ ಹಾಡು ಇದಾಗಿದೆ. ಅರುಣ್ಗೆ ಗಾಯನದಲ್ಲಿ ಆಸಕ್ತಿಯಿರುವುದನ್ನು ಗಮನಿಸಿ ಜೈಲಿನ ಮುಖ್ಯಅಧೀಕ್ಷಕ ಕೆ.ಸುರೇಶ್ ಅವರು ಕೆ.ಕಲ್ಯಾಣ್ ಅವರ ಗಮನಕ್ಕೆ ತಂದಿದ್ದರು. ಕಲ್ಯಾಣ್ ಅವರು ಕಾರಾಗೃಹಕ್ಕೆ ಭೇಟಿ ನೀಡಿ ಅರುಣ್ ಪ್ರತಿಭೆ ಗುರುತಿಸಿ ತಿಂಗಳ ಕಾಲ ತರಬೇತಿ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.