ಬೆಂಗಳೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೂ ಸೇರಿ ಹಿರಿಯ ಅಧಿಕಾರಿಗಳಿಗೆ ನೀಡಲಾಗಿದ್ದ ಆರ್ಡರ್ಲಿಗೆ ಬದಲಾಗಿ ಪರ್ಯಾಯ ವ್ಯವಸ್ಥೆ ರೂಪಿಸಿ, ಗೃಹ ಇಲಾಖೆ ಆದೇಶಿಸಿದೆ.

ಈ ಹಿಂದೆ ಪೊಲೀಸ್ ಕಾನ್ಸ್ಟೆಬಲ್ ಅಥವಾ ಹೆಡ್ ಕಾನ್ಸ್ಟೆಬಲ್ಗಳನ್ನು ಆರ್ಡರ್ಲಿಗಳನ್ನಾಗಿ ನೇಮಕ ಮಾಡಿಕೊಳ್ಳಲಾಗಿತ್ತು. ಈಗ ಆರ್ಡರ್ಲಿಗಳ ಸ್ಥಾನಕ್ಕೆ ಹೋಮ್ ಗಾರ್ಡ್ಸ್ ಅಥವಾ ಹೊರಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿ ನೇಮಿಸಿಕೊಳ್ಳಲು ಆದೇಶಿಸಲಾಗಿದೆ.

ಹೊಸ ಆದೇಶದ ಆನ್ವಯ ಎಸ್.ಪಿ ಸೇರಿದಂತೆ ಡಿಜಿಪಿ–ಐಜಿಪಿ ಹಂತದ ಅಧಿಕಾರಿಗಳಿಗೆ ಒಟ್ಟು 373 ಆರ್ಡರ್ಲಿ ಅಥವಾ ಅನುಯಾಯಿಗಳನ್ನು ನೇಮಿಸಿಕೊಳ್ಳಬಹುದು. ಒಂದು ವೇಳೆ ಅನುಯಾಯಿಗಳ ಅಗತ್ಯವಿಲ್ಲದವರು, ತಮಗೆ ನೇಮಿಸಿಕೊಳ್ಳಲು ನಿಗದಿಪಡಿಸಿದಂತೆ ಹೊರಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿ ಪಡೆದು ಆರ್ಡರ್ಲಿ ಭತ್ಯೆಯನ್ನು ಪಡೆಯಲು ಅವಕಾಶ ಇದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಆರ್ಡರ್ಲಿಗೆ ನೇಮಕಗೊಂಡಿದ್ದ ಪೊಲೀಸ್ ಸಿಬ್ಬಂದಿ, ಹಿರಿಯ ಅಧಿಕಾರಿಗಳ ಮನೆಯಲ್ಲಿ ಅಡುಗೆ ಕೆಲಸ ಮಾಡುವುದು, ತರಕಾರಿ ತರುವುದು, ಮಕ್ಕಳ ಮತ್ತು ಕುಟುಂಬದ ಸದಸ್ಯರ ಜತೆಗೆ ಶಾಪಿಂಗ್ ಹೋಗುವುದು ಸೇರಿದಂತೆ ಎಲ್ಲಾ ರೀತಿಯ ಮನೆಕೆಲಸಗಳನ್ನು ಮಾಡಿಕೊಂಡಿದ್ದರು. ಕಾನೂನು ಮತ್ತು ಸುವ್ಯವಸ್ಥೆ ಕೆಲಸಕ್ಕೆ ನೇಮಕೊಂಡ ಸಿಬ್ಬಂದಿಯಿಂದ, ಹಿರಿಯ ಅಧಿಕಾರಿಗಳ ಮನೆಯಲ್ಲಿ ಮನೆ ಕೆಲಸ ಮಾಡಿಸುವುದು ಸರಿಯಲ್ಲ ಎಂಬ ಅಭಿಪ್ರಾಯವಿತ್ತು. ಈಗ ಆರ್ಡರ್ಲಿ ಕೆಲಸಕ್ಕೆ ಪರ್ಯಾಯ ವ್ಯವಸ್ಥೆ ಮಾಡಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಅವರು ಆದೇಶಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.