ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Namma Metro: ಈ ಭಾನುವಾರ ‘ನಮ್ಮ ಮೆಟ್ರೊ’ ಒಂದು ತಾಸು ಬೇಗ ಆರಂಭ

Published 9 ಮಾರ್ಚ್ 2024, 14:24 IST
Last Updated 9 ಮಾರ್ಚ್ 2024, 14:24 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಪೊಲೀಸ್‌ ವತಿಯಿಂದ ಆಯೋಜಿಸಲಾಗಿರುವ ರಾಜ್ಯಮಟ್ಟದ ಓಟದ ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ಅನುಕೂಲ ಮಾಡಿಕೊಡಲು ಮಾರ್ಚ್‌ 10ರಂದು ಬೆಳಿಗ್ಗೆ ಎಂದಿಗಿಂತ ಒಂದು ತಾಸು ಬೇಗನೇ ಮೆಟ್ರೊ ರೈಲು ಕಾರ್ಯಾಚರಣೆ ನಡೆಸಲಿದೆ.

ಹಸಿರು ಮತ್ತು ನೇರಳೆ ಮಾರ್ಗಗಳ ಎಲ್ಲ ನಾಲ್ಕು ಟರ್ಮಿನಲ್‌ಗಳಲ್ಲಿ ವಾರದ ದಿನಗಳಲ್ಲಿ ಬೆಳಿಗ್ಗೆ 5ಕ್ಕೆ ಮತ್ತು ಪ್ರತಿ ಭಾನುವಾರ ಬೆಳಿಗ್ಗೆ 7 ಗಂಟೆಗೆ ಮೆಟ್ರೊ ರೈಲು ಕಾರ್ಯಾಚರಣೆ ಆರಂಭವಾಗುತ್ತಿತ್ತು. ಈ ಭಾನುವಾರ ಮಾತ್ರ ಬೆಳಿಗ್ಗೆ 6ಕ್ಕೆ ಆರಂಭಗೊಳ್ಳಲಿದೆ ಎಂದು ಬಿಎಂಆರ್‌ಸಿಎಲ್‌ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT