ಬೆಂಗಳೂರು: ವಿದ್ಯುತ್ ವಿತರಣಾ ಪರವಾನಗಿ ನೀಡುವಂತೆ ಕೋರಿ ಮೊದಲ ಬಾರಿಗೆ ಖಾಸಗಿ ಕಂಪನಿಯೊಂದು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ (ಕೆಇಆರ್ಸಿ) ಅರ್ಜಿ ಸಲ್ಲಿಸಿದೆ. ಕೆಇಆರ್ಸಿ ನಿಯಮಗಳ ಪ್ರಕಾರ ಖಾಸಗಿ ಕಂಪನಿಗಳಿಗೆ ವಿದ್ಯುತ್ ವಿತರಿಸಲು ಅವಕಾಶವಿದೆ. ಆದರೆ, ರಾಜ್ಯದಲ್ಲಿ ಇದುವರೆಗೆ ಯಾವುದೇ ಖಾಸಗಿ ಕಂಪನಿಗೆ ವಿದ್ಯುತ್ ವಿತರಣೆಗೆ ಅವಕಾಶ ನೀಡಿರಲಿಲ್ಲ.

‘ಟಾಟಾ ಪವರ್ ಕಂಪನಿ ಲಿಮಿಟೆಡ್ (ಟಿಪಿಸಿಎಲ್) ಬೆಸ್ಕಾಂ ವ್ಯಾಪ್ತಿಯ ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ. ಮೆಸ್ಕಾಂ ವ್ಯಾಪ್ತಿಯ ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಹಾಗೂ ಹೆಸ್ಕಾಂ ವ್ಯಾಪ್ತಿಯ ಬೆಳಗಾವಿ, ಉತ್ತರ ಕನ್ನಡ, ಧಾರವಾಡ ಹಾಗೂ ಚೆಸ್ಕಾಂ ವ್ಯಾಪ್ತಿಯ ಮೈಸೂರು, ಚಾಮರಾಜನಗರ ಮತ್ತು ಹಾಸನದಲ್ಲಿ ವಿದ್ಯುತ್ ವಿತರಿಸಲು ಪರವಾನಗಿ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದೆ’ ಎಂದು ಮೂಲಗಳು ತಿಳಿಸಿವೆ.

ಟಾಟಾ ಪವರ್ ಕಂಪನಿ ಲಿಮಿಟೆಡ್ನವರು ಕೆಇಆರ್ಸಿ ಮುಂದೆ ಈಗಾಗಲೇ ಪ್ರಾತ್ಯಕ್ಷಿಕೆ ನೀಡಿದ್ದಾರೆ. ಪರವಾನಗಿ ನೀಡುವುದರಿಂದ ಆಗುವ ಸಾಧಕ–ಬಾಧಕಗಳ ಬಗ್ಗೆ ವ್ಯಾಪಕವಾಗಿ ಸಮಾಲೋಚನೆ ನಡೆಸಿದ ಬಳಿಕ ಈ ಬಗ್ಗೆ ತೀರ್ಮಾನಕ್ಕೆ ಬರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

‘ವಿದ್ಯುತ್ ವಿತರಣಾ ಕ್ಷೇತ್ರಕ್ಕೆ ಖಾಸಗಿ ಕಂಪನಿಗಳು ಪ್ರವೇಶಿಸಿದರೆ ಎಸ್ಕಾಂಗಳ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪನಿಗಳು ಸುಮಾರು ₹40 ಸಾವಿರ ಕೋಟಿ ನಷ್ಟದಲ್ಲಿವೆ. ಇಂಧನ ಕ್ಷೇತ್ರಕ್ಕೆ ಖಾಸಗಿ ಕಂಪನಿಗಳು ಪ್ರವೇಶ ಪಡೆಯುವುದರಿಂದ ಸಾರ್ವಜನಿಕರಲ್ಲಿ ನಿರೀಕ್ಷೆಗಳು ಹೆಚ್ಚುತ್ತವೆ. ಕೆಲವು ಗ್ರಾಹಕರನ್ನು ಖಾಸಗಿಯವರು ಸೆಳೆಯಬಹುದು’ ಎಂದು ಬೆಸ್ಕಾಂನ ಹಿರಿಯ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಖಾಸಗಿ ಕಂಪನಿಗಳು ಸ್ಪರ್ಧಾತ್ಮಕ ಬೆಲೆ ನಿಗದಿಪಡಿಸಿ, ಗ್ರಾಹಕರಿಗೆ ವಿದ್ಯುತ್ ಪೂರೈಕೆ ಮಾಡಬಹುದು’ ಎಂದು ಕೆಇಆರ್ಸಿ ಸಲಹಾ ಮಂಡಳಿಯ ಮಾಜಿ ಸದಸ್ಯ ಎಂ.ಜಿ. ಪ್ರಭಾಕರ್ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-4-399090884

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.