ಬೆಂಗಳೂರು: ನಗರದ ಮುಖ್ಯ ರಸ್ತೆ ಮತ್ತು ಉಪ ಮುಖ್ಯ ರಸ್ತೆಗಳಲ್ಲಿ ಬೀದಿಬದಿ ವ್ಯಾಪಾರ ನಿಷೇಧಿಸಲು ಜಿಬಿಎ ರೂಪಿಸುತ್ತಿರುವ ನೀತಿಯನ್ನು ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘ ಖಂಡಿಸಿದೆ.

‘ಈ ನೀತಿ ಅಕ್ರಮ ಹಾಗೂ ಸಂವಿಧಾನ ವಿರೋಧಿಯಾದುದು. ಬೀದಿಬದಿ ವ್ಯಾಪಾರ ನಿಷೇಧಿಸುವ ಪ್ರಸ್ತಾವವನ್ನು ತಕ್ಷಣ ಹಿಂಪಡೆಯಬೇಕು’ ಎಂದು ಸಂಘದ ಅಧ್ಯಕ್ಷ ಬಾಬು ಒತ್ತಾಯಿಸಿದ್ದಾರೆ.

'ಬೀದಿ ಬದಿ ವ್ಯಾಪಾರಿಗಳು (ಜೀವನೋಪಾಯದ ರಕ್ಷಣೆ ಮತ್ತು ನಿಯಂತ್ರಣ) ಕಾಯ್ದೆ ಜಾರಿಗೆ ಬಂದು ದಶಕ ಕಳೆದರೂ ಸಮಗ್ರ ಸಮೀಕ್ಷೆಗಳು ಪೂರ್ಣಗೊಂಡಿಲ್ಲ. ಎಲ್ಲ ವ್ಯಾಪಾರಿಗಳಿಗೆ ಗುರುತಿನ ಚೀಟಿಗಳು ನೀಡಲಾಗಿಲ್ಲ ಮತ್ತು ಸಾವಿರಾರು ಜನರು ಪಟ್ಟಿಯಿಂದ ಹೊರಗಿದ್ದಾರೆ. ಈ ಕಾಯ್ದೆ ಸರಿಯಾಗಿ ಜಾರಿಯಾಗಿಲ್ಲವೆಂದು ಸಂಸದೀಯ ಸ್ಥಾಯಿ ಸಮಿತಿ ಕೂಡ ವರದಿಯಲ್ಲಿ ಸ್ಪಷ್ಟವಾಗಿ ಹೇಳಿದೆ. ಸರ್ಕಾರ ತನ್ನ ಕರ್ತವ್ಯವನ್ನು ನಿಭಾಯಿಸದಿದ್ದರೂ ವ್ಯಾಪಾರಿಗಳಿಗೆ ಶಿಕ್ಷೆ ವಿಧಿಸುವುದು ಸಂಪೂರ್ಣ ಅನ್ಯಾಯ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಬೀದಿ ಬದಿ ವ್ಯಾಪಾರಿಗಳ ಕಾಯ್ದೆಯನ್ನು ಸಂಪೂರ್ಣವಾಗಿ ಜಾರಿಗೆ ತರಬೇಕು. ಸಮಗ್ರ ಸಮೀಕ್ಷೆ ನಡೆಸಿ ಎಲ್ಲರಿಗೂ ಗುರುತಿನ ಚೀಟಿಗಳನ್ನು ನೀಡಬೇಕು. ಹೊಸ ನಗರ ಪಾಲಿಕೆಗಳಲ್ಲಿ ‘ಟೌನ್ ವೆಂಡಿಂಗ್’ ಸಮಿತಿಗಳನ್ನು ರಚಿಸಿ, ವ್ಯಾಪಾರಿಗಳ ನೈಜ ಪ್ರಾತಿನಿಧ್ಯವನ್ನು ಖಚಿತಪಡಿಸಬೇಕು. ಬೀದಿ ಬದಿ ವ್ಯಾಪಾರಿಗಳ ತೆರವು, ಜಪ್ತಿ ಮತ್ತು ಕಿರುಕುಳವನ್ನು ತಕ್ಷಣ ನಿಲ್ಲಿಸಬೇಕು’ ಎಂದು ಕಾರ್ಯಕಾರಿ ಸಮಿತಿ ಸದಸ್ಯ ಲೇಖ ಅಡವಿ, ಕಾನೂನು ಸಲಹೆಗಾರ ವಿನಯ್ ಶ್ರೀನಿವಾಸ್ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.