ಬೆಂಗಳೂರು: ಸಾರಿಗೆ ಇಲಾಖೆಯ ವತಿಯಿಂದ ರಸ್ತೆ ಸುರಕ್ಷತೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಮತ್ತು ರಸ್ತೆಗಳನ್ನು ಸುರಕ್ಷಿತಗೊಳಿಸುವ ಉದ್ದೇಶದಿಂದ ಮಾರ್ಚ್ 1ರಂದು ಬೆಳಿಗ್ಗೆ 5ಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ 5 ಕಿ.ಮೀವರೆಗಿನ ಸೇಫಥಾನ್ ಕಾರ್ಯಕ್ರಮಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಲಿದ್ದಾರೆ.

ಸೇಫಥಾನ್ನ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ರಾಮಲಿಂಗಾರೆಡ್ಡಿ, ‘ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಬೇಕು, ನಮ್ಮ ಅಕ್ಕಪಕ್ಕ ಸಂಚರಿಸುವ ವಾಹನಗಳ ಕುರಿತು ನಿಗಾ ವಹಿಸುವ ಜೊತೆಗೆ ವೇಗ ಮಿತಿಯನ್ನು ಕಾಪಾಡಿಕೊಳ್ಳಬೇಕು, ಸಂಚಾರ ದಟ್ಟಣೆ, ಸಿಗ್ನಲ್ ದಾಟುವಾಗ ಸಾರ್ವಜನಿಕರು ಜಾಗ್ರತೆ ವಹಿಸಬೇಕು ಎಂಬ ಸಂದೇಶ ರವಾನೆಗಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.

ಈ ಸೇಫಥಾನ್ನಲ್ಲಿ ನಡಿಗೆ, ಓಟ ಮತ್ತು ಸೈಕ್ಲಥಾನ್ ಕೂಡ ಇರಲಿವೆ. ಸಾರ್ವಜನಿಕರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲರೂ ಭಾಗವಹಿಸಬಹುದು. ಆಸಕ್ತರು www.saferoadskarnataka.com ವೆಬ್ಸೈಟ್ಗೆ ಭೇಟಿ ನೀಡಿ ಹೆಸರು ನೋಂದಣಿ ಮಾಡಿಕೊಳ್ಳಬಹುದು.

ಕಾರ್ಯಕ್ರಮದಲ್ಲಿ ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್.ವಿ. ಪ್ರಸಾದ್, ಆಯುಕ್ತ ಯೋಗೀಶ್ ಮತ್ತು ಹೆಚ್ಚುವರಿ ಆಯುಕ್ತ ಮಲ್ಲಿಕಾರ್ಜುನ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.