ಶುಕ್ರವಾರ, ಮೇ 14, 2021
25 °C
ಕರ್ನಾಟಕ ಪ್ರಕಾಶಕರ ಸಂಘದಿಂದ ಆಯ್ಕೆ

ಪತ್ರಕರ್ತೆ ಪೂರ್ಣಿಮಾ, ಸೈಯದ್‌ ಇಸಾಕ್‌ ಅವರಿಗೆ ಪ್ರಶಸ್ತಿ: ಪ್ರಕಾಶಕರ ಸಂಘದ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:ವಿಶ್ವ ಪುಸ್ತಕ ದಿನದ ಅಂಗವಾಗಿ ಕರ್ನಾಟಕ ಪ್ರಕಾಶಕರ ಸಂಘದಿಂದ ನೀಡಲಾಗುವ ‘ಎಂ.ಗೋಪಾಲಕೃಷ್ಣ ಅಡಿಗ ಪುಸ್ತಕ ಪರಿಚಾಲಕ ಪ್ರಶಸ್ತಿ’ಗೆ ಮೈಸೂರಿನ ಪುಸ್ತಕ ಪ್ರೇಮಿ ಸೈಯದ್‌ ಇಸಾಕ್‌ ಹಾಗೂ ‘ನಂಜನಗೂಡು ತಿರುಮಲಾಂಬ ಪ್ರಶಸ್ತಿ’ಗೆ ಹಿರಿಯ ಪತ್ರಕರ್ತೆ ಹಾಗೂ ಪ್ರಕಾಶಕಿ ಆರ್.ಪೂರ್ಣಿಮಾ ಅವರನ್ನು ಆಯ್ಕೆ ಮಾಡಲಾಗಿದೆ.

‘ಅಂಕಿತ ಪ್ರಕಾಶನ ಹಾಗೂ ಶೃಂಗಾರ ಪ್ರಕಾಶನ ಪ್ರಾಯೋಜಿಸಿರುವ ಈ ಪ್ರಶಸ್ತಿಗಳು ತಲಾ ₹5 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿವೆ.’

‘ವಿಶ್ವ ಪುಸ್ತಕ ದಿನದ ಪ್ರಯುಕ್ತ ಏ.23ರಂದು ಬೆಳಿಗ್ಗೆ 11.30ಕ್ಕೆ ಸೆಂಟ್ರಲ್‌ ಕಾಲೇಜಿನ ಕೇಂದ್ರ ಸಾಹಿತ್ಯ ಅಕಾಡೆಮಿ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕವಿ ಸಿದ್ಧಲಿಂಗಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ’ ಎಂದು ಕರ್ನಾಟಕ ಪ್ರಕಾಶಕರ ಸಂಘದ ಅಧ್ಯಕ್ಷರು ಪ್ರಕಾಶ್‌ ಕಂಬತ್ತಳ್ಳಿ ತಿಳಿಸಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು