ಬೆಂಗಳೂರು: ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಜುಲೈ 9 ಮತ್ತು 10ರಂದು ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ.

ಬೀದರ್, ಕಲಬುರ್ಗಿ, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೂ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಸೇರಿದಂತೆ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು,ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ.

ಕರಾವಳಿ ಭಾಗದಲ್ಲಿ ಗಂಟೆಗೆ 35 ರಿಂದ 45 ಕಿ.ಮೀ. ವೇಗದಲ್ಲಿ ಗಾಳಿ ಬೀಸುವುದರಿಂದ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಸೋಮವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ತಾಸುಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಕದ್ರಾ (23 ಸೆಂ.ಮೀ), ಕುಮಟಾ (22 ಸೆಂ.ಮೀ), ಗೇರುಸೊಪ್ಪ (20 ಸೆಂ.ಮೀ), ಶಿರಾಲಿ (20 ಸೆಂ.ಮೀ), ಮಂಕಿ (19 ಸೆಂ.ಮೀ), ಉಡುಪಿಯಲ್ಲಿ (18 ಸೆಂ.ಮೀ) ಮಳೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.