ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‌Karnataka Rain: ನಾಲ್ಕು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’

Published 8 ಜೂನ್ 2024, 23:35 IST
Last Updated 8 ಜೂನ್ 2024, 23:35 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ವಿವಿಧೆಡೆ ಭಾನುವಾರವೂ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ನಾಲ್ಕು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದೆ.

ಉತ್ತರ ಕನ್ನಡ, ಧಾರವಾಡ, ಹಾವೇರಿ ಹಾಗೂ ಉಡುಪಿ ಜಿಲ್ಲೆಗೆ ‘ರೆಡ್ ಅಲರ್ಟ್’ ನೀಡಲಾಗಿದ್ದು, ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಹಾಗೂ ಗದಗ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ನೀಡಲಾಗಿದ್ದು, ಈ ಎರಡು ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಂಭವವಿದೆ. ಬಾಗಲಕೋಟೆ, ಕೊಪ್ಪಳ, ಶಿವಮೊಗ್ಗ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಅಲರ್ಟ್ ನೀಡಲಾದ ಜಿಲ್ಲೆಗಳ ಕೆಲವೆಡೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ: ಚಂಡಮಾರುತದ ಹವಾಮಾನವು ಕರಾವಳಿಯಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಗಾಳಿಯು 55 ಕಿ.ಮೀ. ವೇಗದಲ್ಲಿ ಬೀಸುವ ಸಂಭವವಿದೆ. ಇದರಿಂದಾಗಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಸಮುದ್ರದಲ್ಲಿ ಭಾರಿ ಅಲೆಗಳು ಕಾಣಿಸಿ
ಕೊಳ್ಳಬಹುದು ಎಂದು ಇಲಾಖೆ ಹೇಳಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಇದೇ 12ರವರೆಗೂ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಇಲಾಖೆ, ಮುಂದಿನ ಎರಡು ದಿನ ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ಒಳನಾಡಿನ ಹಲವು ಜಿಲ್ಲೆಗಳಿಗೆ ‘ಆರೆಂಜ್’ ಹಾಗೂ ‘ಯೆಲ್ಲೊ ಅಲರ್ಟ್’ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT