ಬಿಸಿಯೂಟ ಸಿಬ್ಬಂದಿಗೆ ಏಪ್ರಿಲ್‌ನಿಂದಲೇ ವೇತನ ನೀಡಿ: ಎಸ್.ವರಲಕ್ಷ್ಮಿ

ಬೆಂಗಳೂರು: ‘ಕೋವಿಡ್‌ನಿಂದಾಗಿ ಬಿಸಿಯೂಟ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಏಪ್ರಿಲ್‌ನಿಂದಲೇ ವೇತನ ಬಿಡುಗಡೆ ಮಾಡಬೇಕು’ ಎಂದು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಸೋಮವಾರ ಇಲ್ಲಿ ಮಾತನಾಡಿದ ಸಂಘದ ಗೌರವ ಅಧ್ಯಕ್ಷೆ ಎಸ್.ವರಲಕ್ಷ್ಮಿ ‘ಕೇಂದ್ರ ಸರ್ಕಾರವು ಬಿಸಿಯೂಟ ಸಿಬ್ಬಂದಿಗೆ 10 ವರ್ಷಗಳಿಂದ ವೇತನ ಹೆಚ್ಚಿಸಿಲ್ಲ. ಕೋವಿಡ್ ಸಮಯದಲ್ಲಿ ರಾಜ್ಯ ಸರ್ಕಾರವು ಪ್ರಕಟಿಸಿದ ಆರ್ಥಿಕ ಪ್ಯಾಕೇಜ್‌ಗಳಿಂದಲೂ ನಮ್ಮನ್ನು ಹೊರಗಿಡಲಾಗಿದೆ. ಪ್ರತಿವರ್ಷ ನಮಗೆ ಜೂನ್‌ನಿಂದ ವೇತನ ನೀಡಬೇಕು. ಈಗ ಮೂರು ತಿಂಗಳಾದರೂ ಸಂಬಳ ಕೈಸೇರಿಲ್ಲ. ಬಾಕಿ ಉಳಿಸಿಕೊಂಡಿರುವ ಈ ಮೊತ್ತದ ಜೊತೆಗೆ ಏಪ್ರಿಲ್ ಮತ್ತು ಮೇ ತಿಂಗಳ ವೇತನವನ್ನೂ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿದರು.
‘ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ ಬಿಸಿಯೂಟ ಯೋಜನೆಯನ್ನು ಬಲಪಡಿಸುವುದರ ಜೊತೆಗೆ ಈಗಿರುವ ಮಾದರಿಯನ್ನೇ ಮುಂದುವರಿಸಬೇಕು.’ ಎಂದರು. ‘ಕೇಂದ್ರೀಕೃತ ಅಡುಗೆ ಕೇಂದ್ರ ಮಾದರಿಯನ್ನು ಜಾರಿಗೊಳಿಸಬಾರದು.’ ಎಂದು ಮನವಿ ಮಾಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.