ಮಂಗಳವಾರ, ಮಾರ್ಚ್ 9, 2021
29 °C

ಶೌಚಾಲಯ ನಿರ್ವಹಣೆಯಲ್ಲಿ ಭ್ರಷ್ಟಾಚಾರ: ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಾರ್ವಜನಿಕ ಶೌಚಾಲಯಗಳ ನಿರ್ವಹಣೆಯಲ್ಲಿ ಬಿಬಿಎಂಪಿ ಭ್ರಷ್ಟಾಚಾರ ನಡೆಸಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷ ಆರೋಪಿಸಿದೆ.

‘ಸಾರ್ವಜನಿಕ ಶೌಚಾಲಯಗಳಲ್ಲಿ ಮೂತ್ರವಿಸರ್ಜನೆ ಉಚಿತ ಎಂದು ಅಧಿಕಾರಿಗಳೇ ಹೇಳಿದ್ದಾರೆ. ಆದರೂ, ಶೌಚಾಲಯಗಳಲ್ಲಿ ಮನಬಂದಂತೆ ಹಣ ವಸೂಲಿ ಮಾಡಲಾಗುತ್ತಿದೆ. ಈ ಬಗ್ಗೆ ಪಾಲಿಕೆಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಎಸ್.ಮಂಜುನಾಥ್ ದೂರಿದ್ದಾರೆ.

‘ಶೌಚಾಲಯಗಳ ನಿರ್ವಹಣೆಯ ಹೆಸರಿನಲ್ಲಿ ನಡೆದಿರುವ ಭ್ರಷ್ಟಾಚಾರದ ಕುರಿತು ಲೋಕಾಯುಕ್ತ ಅಥವಾ ಎಸಿಬಿ ತನಿಖೆಯಾಗಬೇಕು. ಅದರಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಹಾಗೂ ನೌಕರರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು.’

‘ಪ್ರತಿ ಶೌಚಾಲಯದ ಮುಂದೆ ಅದರ ನಿರ್ವಹಣೆ ಗುತ್ತಿಗೆ ಪಡೆದವರ ಪೂರ್ಣವಿವರ, ಅಧಿಕಾರಿಗಳ ಸಂಪರ್ಕ, ಶುಲ್ಕ ವಿವರದ ಫಲಕ ಪ್ರದರ್ಶಿಸಬೇಕು. ಶೌಚಾಲಯಗಳಿಗೆ ಜಲಮಂಡಳಿಯಿಂದ ನಿರಂತರವಾಗಿ ನೀರು ಪೂರೈಕೆಯಾಗಬೇಕು. ಪಾಲಿಕೆ ಕಚೇರಿಗಳು ಹಾಗೂ ವಾಣಿಜ್ಯ ಮಳಿಗೆಗಳಲ್ಲಿನ ಶೌಚಾಲಯಗಳನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು