ಬುಧವಾರ, 10 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಒಳಮೀಸಲು | ಪ್ರತಿಭಟನಾ ಕಿಚ್ಚು: ವಿಧಾನಸೌಧದತ್ತ ನುಗ್ಗಲು ಯತ್ನ, ಪೊಲೀಸರ ತಡೆ

Published : 10 ಸೆಪ್ಟೆಂಬರ್ 2025, 15:53 IST
Last Updated : 10 ಸೆಪ್ಟೆಂಬರ್ 2025, 15:53 IST
ಫಾಲೋ ಮಾಡಿ
Comments
ಒಳಮೀಸಲಾತಿ ವರ್ಗೀಕರಣದಲ್ಲಿ ಆಗಿರುವ ತಾರತಮ್ಯ ಸರಿಪಡಿಸುವಂತೆ ಆಗ್ರಹಿಸಿ ಬಂಜಾರ ಭೋವಿ ಕೊರಚ ಕೊರವ ಮೀಸಲಾತಿ ಒಕ್ಕೂಟದಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು 
– ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.
ಒಳಮೀಸಲಾತಿ ವರ್ಗೀಕರಣದಲ್ಲಿ ಆಗಿರುವ ತಾರತಮ್ಯ ಸರಿಪಡಿಸುವಂತೆ ಆಗ್ರಹಿಸಿ ಬಂಜಾರ ಭೋವಿ ಕೊರಚ ಕೊರವ ಮೀಸಲಾತಿ ಒಕ್ಕೂಟದಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು  – ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.
ಒಳಮೀಸಲಾತಿ ವರ್ಗೀಕರಣದಲ್ಲಿ ಆಗಿರುವ ತಾರತಮ್ಯ ಸರಿಪಡಿಸುವಂತೆ ಆಗ್ರಹಿಸಿ ಬಂಜಾರ ಭೋವಿ ಕೊರಚ ಕೊರವ ಮೀಸಲಾತಿ ಒಕ್ಕೂಟದಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದ ಬಳಿ ರಸ್ತೆತಡೆ ನಡೆಸಿದ ಪ್ರತಿಭಟನಕಾರರು  
ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.
ಒಳಮೀಸಲಾತಿ ವರ್ಗೀಕರಣದಲ್ಲಿ ಆಗಿರುವ ತಾರತಮ್ಯ ಸರಿಪಡಿಸುವಂತೆ ಆಗ್ರಹಿಸಿ ಬಂಜಾರ ಭೋವಿ ಕೊರಚ ಕೊರವ ಮೀಸಲಾತಿ ಒಕ್ಕೂಟದಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದ ಬಳಿ ರಸ್ತೆತಡೆ ನಡೆಸಿದ ಪ್ರತಿಭಟನಕಾರರು   ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.
ಸಾಮಾಜಿಕ ನ್ಯಾಯ ಸಂವಿಧಾನ ಎಂದು ಭಾಷಣ ಮಾಡುವವರೇ ನಮ್ಮ ಸಮಾಜಗಳ ಬೆನ್ನಿಗೆ ಚೂರಿ ಹಾಕಿದ್ದಾರೆ
ಪಿ.ರಾಜೀವ್ ಮಾಜಿ ಶಾಸಕ
ಸರ್ಕಾರಕ್ಕೆ ವಾರದ ಗಡುವು
ರಾಜ್ಯ ಸರ್ಕಾರಕ್ಕೆ ಹೋರಾಟಗಾರರು ವಾರದ ಗಡುವು ನೀಡಿದ್ದಾರೆ. ಅಷ್ಟರಲ್ಲಿ ಒಳಮೀಸಲಾತಿ ಜಾರಿಯಲ್ಲಿ ಆಗಿರುವ ತಾರತಮ್ಯ ಸರಿಪಡಿಸಬೇಕು. ಸರಿಪಡಿಸದೇ ಇದ್ದರೆ ರಾಜ್ಯದಾದ್ಯಂತ ಹೋರಾಟ ತೀವ್ರಗೊಳಿಸುತ್ತೇವೆ ಎಂದು ಪ್ರತಿಭಟನಕಾರರು ಎಚ್ಚರಿಸಿದರು. 
‘ಪರಿಶಿಷ್ಟ ಜಾತಿಗಳಿಗೆ ನ್ಯಾಯ ಸಿಕ್ಕಿಲ್ಲ’
‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮನೆ ಮುರಿಯುವ ಕೆಲಸ ಮಾಡುವುದು ಸುಲಭ. ಮನೆ ಕಟ್ಟುವುದು ಅತ್ಯಂತ ಕಷ್ಟದ ಕೆಲಸ. ಜನ ನಿಮಗೆ ಆಶೀರ್ವಾದ ಮಾಡಿ ಅಧಿಕಾರಕ್ಕೆ ತಂದಿದ್ದಾರೆ. ಪರಿಶಿಷ್ಟ ಜಾತಿ ಪರಿಶಿಷ್ಟ ಸಮುದಾಯಗಳು ಅಲೆಮಾರಿ ಸಮುದಾಯಕ್ಕೆ ನ್ಯಾಯ ಕೊಡುವ ಅಪೇಕ್ಷೆ ಜನರಲ್ಲಿ ಇತ್ತು. ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಸರ್ಕಾರವು ಶೋಷಿತರಿಗೆ ನ್ಯಾಯ ನೀಡುವ ವಿಚಾರದಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು. ‘ಎಷ್ಟು ದಿನ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದೀರಿ ಎಂಬುದು ಮುಖ್ಯವಲ್ಲ ಸಿದ್ದರಾಮಯ್ಯನವರೇ. ಆ ಕುರ್ಚಿಯಲ್ಲಿ ಕೂತಾಗ ಎಲ್ಲ ಸಮುದಾಯಗಳಿಗೆ ನ್ಯಾಯ ಕೊಟ್ಟಿದ್ದೀರಾ ಎಂಬುದು ಮುಖ್ಯ’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT