ಕೈದಿಗಳಿಗೆ ಸಾಹಿತ್ಯ ಪರಿಚಯಿಸಿದರೆ ಅವರಲ್ಲಿ ಅಲ್ಪಸ್ವಲ್ಪವಾದರೂ ಬದಲಾವಣೆ ಸಾಧ್ಯ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿಯೂ ಸಾಹಿತ್ಯ ಕಮ್ಮಟ ಹಮ್ಮಿಕೊಳ್ಳಲಾಗುತ್ತದೆ
ಎಲ್.ಎನ್. ಮುಕುಂದರಾಜ್ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ
ಸಂತೆಯಲ್ಲಿ ಕನ್ನಡ ಸಾಹಿತ್ಯ ವಿಸ್ತರಣೆ
ಸಾಹಿತ್ಯವನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ಅಕಾಡೆಮಿ ಹಮ್ಮಿಕೊಂಡಿದ್ದ ‘ಸಂತೆಯಲ್ಲಿ ಕನ್ನಡ ಸಾಹಿತ್ಯ’ ಯೋಜನೆಗೆ ಉತ್ತಮ ಸ್ಪಂದನೆ ವ್ಯಕ್ತವಾಗಿರುವುದರಿಂದ ವಿವಿಧ ಸಂತೆಗಳಲ್ಲಿ ಸಾಹಿತ್ಯದ ಕಾರ್ಯಕ್ರಮ ನಡೆಸಲು ಅಕಾಡೆಮಿ ನಿರ್ಧರಿಸಿದೆ. ಜೂನ್ ತಿಂಗಳಲ್ಲಿ ತುಮಕೂರಿನ ಕುಣಿಗಲ್ ತಾಲ್ಲೂಕಿನ ಎಡೆಯೂರು ಗ್ರಾಮದ ಸಂತೆ ಮೈದಾನದಲ್ಲಿ ಈ ಕಾರ್ಯಕ್ರಮ ನಡೆಸುವ ಮೂಲಕ ಯೋಜನೆಗೆ ಚಾಲನೆ ನೀಡಲಾಗಿತ್ತು. ಅಲ್ಲಿ ಮೆರವಣಿಗೆಯನ್ನೂ ನಡೆಸಲಾಗಿತ್ತು. ಸಾಹಿತ್ಯಾಭಿರುಚಿ ಬೆಳೆಸುವುದರಿಂದ ವಿವಿಧ ಸಂತೆಗಳಲ್ಲಿ ಸ್ಥಳೀಯರ ಸಹಕಾರದೊಂದಿಗೆ ಈ ಕಾರ್ಯಕ್ರಮ ನಡೆಸಿ ಪಂಪ ಕುಮಾರವ್ಯಾಸ ಕುವೆಂಪು ಬೇಂದ್ರೆ ಮೊದಲಾದವರ ಬಗ್ಗೆ ಪರಿಚಯಿಸಲಿದೆ.