ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಿಂಗತ್ವ ಅಲ್ಪಸಂಖ್ಯಾತರು: ಪ್ರತ್ಯೇಕ ನಿಗಮಕ್ಕೆ ಆಗ್ರಹ

Published 30 ಜನವರಿ 2024, 15:11 IST
Last Updated 30 ಜನವರಿ 2024, 15:11 IST
ಅಕ್ಷರ ಗಾತ್ರ

ಬೆಂಗಳೂರು: ‘ಲಿಂಗತ್ವ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ನಿಗಮ ಸ್ಥಾಪಿಸಿ, ₹100 ಕೋಟಿ ಅನುದಾನವನ್ನು ನೀಡಬೇಕು’ ಎಂದು ಲಿಂಗತ್ವ ಅಲ್ಪಸಂಖ್ಯಾತರ ವೇದಿಕೆ ಸರ್ಕಾರಕ್ಕೆ ಆಗ್ರಹಿಸಿದೆ. 

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ಸಂಚಾಲಕ ಮಲ್ಲು ಕುಂಬಾರ, ‘ಕಾಂಗ್ರೆಸ್ ಪಕ್ಷವು ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ನಿಗಮ ಸ್ಥಾಪಿಸುವುದಾಗಿ ಘೋಷಿಸಿತ್ತು. ಆ ಘೋಷಣೆಯನ್ನು ಈಗ ಜಾರಿ ಮಾಡಬೇಕು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಗೃಹ ಲಕ್ಷ್ಮಿ’, ‘ಶಕ್ತಿ’ ಸೇರಿದಂತೆ ವಿವಿಧ ಯೋಜನೆಗಳ ಲಾಭ ಪಡೆದುಕೊಳ್ಳಲು ಲಿಂಗತ್ವ ಅಲ್ಪಸಂಖ್ಯಾತರಿಗೆ ಸಾಧ್ಯವಾಗುತ್ತಿಲ್ಲ. ಇದರಿಂದ ಸಮದಾಯದವರು ಸಮಸ್ಯೆ ಎದುರಿಸುತ್ತಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಲಿಂಗತ್ವ ಅಲ್ಪಸಂಖ್ಯಾತರಿಗೆ ನೋಡಲ್ ಇಲಾಖೆಯಾಗಿದ್ದು, ಇಲಾಖೆ ಸಚಿವರು ಸಮುದಾಯದ ಕುಂದು ಕೊರತೆ ಬಗ್ಗೆ ಸಭೆ ನಡೆಸಬೇಕು’ ಎಂದು ತಿಳಿಸಿದರು.

‘ಲಿಂಗತ್ವ ಅಲ್ಪಸಂಖ್ಯಾತರು ರಾಜ್ಯದಲ್ಲಿ ಎಷ್ಟು ಜನರಿದ್ದಾರೆ ಎಂದು ತಿಳಿಯಲು ಸಮೀಕ್ಷೆ ಮಾಡಬೇಕು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧ್ಯಕ್ಷರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆ ಹಾಗೂ ಸಮುದಾಯದವರನ್ನು ಒಳಗೊಂಡ ಜಿಲ್ಲಾ ಲಿಂಗತ್ವ ಅಲ್ಪಸಂಖ್ಯಾತರ ಸಮಿತಿಯನ್ನು ರಚಿಸಬೇಕು. ಈ ಸಮುದಾಯಕ್ಕೆ ಎಲ್ಲ ವಸತಿ ಯೋಜನೆಗಳಲ್ಲಿ ಶೇ 5 ರಷ್ಟು ಮೀಸಲಾತಿ ಘೋಷಿಸಬೇಕು’ ಎಂದು ಒತ್ತಾಯಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT