ಗುರುವಾರ , ಸೆಪ್ಟೆಂಬರ್ 19, 2019
29 °C

ಸಂಚಾರ ನಿಯಮ ಉಲ್ಲಂಘನೆ ದಂಡ ಇಳಿಸಲು ನಿರ್ಧಾರ: ಯಡಿಯೂರಪ್ಪ

Published:
Updated:

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ದಂಡ ಇಳಿಸಲು ನಿರ್ಧಾರ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬುಧವಾರ ಹೇಳಿದ್ದಾರೆ. 

ಸಂಚಾರ ನಿಯಮ ಉಲ್ಲಂಘನೆ ದಂಡ ದುಪ್ಪಟ್ಟಿಗೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ದಂಡ ಕಡಿತಗೊಳಿಸಲು ನಿರ್ಧಾರ ಮಾಡಲಾಗಿದೆ ಎಂದು ಅವರು ಹೇಳಿದರು. 

ದಂಡ ಕಡಿತಗೊಳಿಸಲು ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಅವರು ಮಾಹಿತಿ ನೀಡಿದರು. 

ಈಗಾಗಲೇ ಗುಜರಾತ್ ರಾಜ್ಯದಲ್ಲೂ ಇಳಿಕೆ ಮಾಡಲಾಗಿದೆ. ಗುಜರಾತ್ ಮಾದರಿಯ ದಂಡ ಇಳಿಕೆಯ ಮಾಹಿತಿ ಪಡೆದು ರಾಜ್ಯದಲ್ಲೂ ಜಾರಿಗೊಳಿಸಲಾಗುವುದು ಎಂದು ಯಡಿಯೂರಪ್ಪ ಹೇಳಿದರು. 

Post Comments (+)