ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹10 ಕೋಟಿ ಸಾಲ ಸಹಾಯಧನವಾಗಿ ಪರಿವರ್ತಿಸಲು ಮನವಿ

Last Updated 23 ಸೆಪ್ಟೆಂಬರ್ 2021, 22:27 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಅಡಿಕೆ ಸಹಕಾರ ಮಾರಾಟ ಮಂಡಳಕ್ಕೆ ಈ ಹಿಂದೆ ನೀಡಿದ್ದ ₹10 ಕೋಟಿ ಸಾಲವನ್ನು ಸಹಾಯಧನವಾಗಿ ಪರಿವರ್ತಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದೆ.

‘ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಮಹಾಮಂಡಳಕ್ಕೆ ₹10 ಕೋಟಿ ಸಾಲ ನೀಡಿದ್ದರು. ಸಾಲಕ್ಕೆ ನಿಯಮಿತವಾಗಿ ಬಡ್ಡಿ ಪಾವತಿಸಲಾಗುತ್ತಿದೆ. ಅಡಿಕೆ ದರ ಕುಸಿದ ಸಂದರ್ಭದಲ್ಲಿ ಮಾರುಕಟ್ಟೆ ಮಧ್ಯ ಪ್ರವೇಶ ಮಾಡಿ ಅಡಿಕೆ ಖರೀದಿ ಮಾಡಲಾಗಿತ್ತು’ ಎಂದು ಸಂಸ್ಥೆಯ ಅಧ್ಯಕ್ಷ ಮಂಜಪ್ಪ ಹೊಸಬಾಳೆ ಮುಖ್ಯಮಂತ್ರಿಯವರಿಗೆ ವಿವರಿಸಿದರು.

ಇದರಿಂದ ಮಹಾಮಂಡಳ ನಷ್ಟಕ್ಕೆ ಗುರಿಯಾಗಿದೆ. ಆದ್ದರಿಂದ ಸಾಲದ ಮೊತ್ತವನ್ನು ಸಹಾಯ ಧನವನ್ನಾಗಿ ಪರಿವರ್ತಿಸುವಂತೆ ಮನವಿ ಮಾಡಿದ್ದು, ಸಹಾನುಭೂತಿಯಿಂದ ಪರಿಶೀಲಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ಮಂಜಪ್ಪ ಹೇಳಿದ್ದಾರೆ.

ಮಹಾಮಂಡಳದ ಉಪಾಧ್ಯಕ್ಷ ಆರ್‌.ಎಂ.ಹೆಗಡೆ ಬಾಳೇಸರ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಈ ಸಂದರ್ಭದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT